10:07 PM Thursday8 - January 2026
ಬ್ರೇಕಿಂಗ್ ನ್ಯೂಸ್
ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಂಜಿಮೊಗರು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

08/01/2026, 20:21

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಂಜಿಮೊಗರು ಶಾಖೆಯ ಒಂಬತ್ತನೇಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಶ್ರೀ ಗೋಪಾಲ ಕೃಷ್ಣ ಭಜನಾ ಮಂಡಳಿ,ಉರುಂದಾಡಿ, ಪಂಜಿಮೊಗರು, ಯುವವಾಹಿನಿ (ರಿ.) ಕೂಳೂರು ಘಟಕ ,ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ ಮತ್ತು ಲಯನ್ಸ್ ಕ್ಲಬ್ ಕುದುರೆಮುಖ ಹಾಗೂ ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾವೂರು, ಪ್ರಖಂಡ ಇವರ ಸಹಯೋಗದೊಂದಿಗೆ ಪಂಜಿಮೊಗರು ಉರುಂದಾಡಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸಭಾಭವನದಲ್ಲಿ ಜರುಗಿತು .
ಈ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಪಂಜಿಮೊಗರು ವಾರ್ಡ್ ಮಾಜಿ ಕಾರ್ಪೋರೇಟರ್ ಶ್ರೀ ಅನಿಲ್ ಕುಮಾರ್ ರವರು ಉದ್ಘಾಟಿಸಿ ಮಾತನಾಡಿ ,ಆತ್ಮಶಕ್ತಿ ಸಂಸ್ಥೆಯು ಗ್ರಾಮೀಣ ಭಾಗದ ಜನರಿಗೆ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು ಇಂತಹ ಸಮಾಜಮುಖಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಡಲಿ ಎಂದು ಶುಭ ಹಾರೈಸಿದರು.
ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಮಂಗಳೂರು ಇದರ ವಿದ್ಯಾರ್ಥಿನಿ ಮಂಜುಳರವರು ಮಾತನಾಡಿ ಆರೋಗ್ಯದ ಬಗ್ಗೆ ಮುಂಜಾಗ್ರತೆ ಹಾಗೂ ಆರೋಗ್ಯದ ಮಹತ್ವದ ಬಗ್ಗೆ ತಿಳಿಸಿ ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ಪರಿಸರದಲ್ಲಿ ಇಂತಹ ಸಂಘ ಸಂಸ್ಥೆಗಳೊಂದಿಗೆ ನಿರಂತರ ಶಿಬಿರವನ್ನು ಆಯೋಜಿಸುತ್ತಾ ಬಂದಿರುತ್ತೇವೆ. ಇದು ಸಂಘದ ೯೮ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಪ್ರತಿ ಶಿಬಿರದಲ್ಲೂ ಸುಮಾರು ೨೦೦ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದ ಸದುಪಯೋಗ ಪಡೆಯುತ್ತಾ ಬಂದಿರುತ್ತಾರೆ ಇದು ನಮ್ಮ ಸಂಘದ ಹೆಮ್ಮೆಯ ವಿಷಯ ಎಂದರು.
ಸಂಘವು ಶಿಬಿರವನ್ನು ಆಯೋಜಿಸಲು ಸಹಕರಿಸಿದ ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳಿಗೆ, ವೈದ್ಯರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮನಾಥ್ ಸನಿಲ್, ಶ್ರೀ ಗೋಪಾಲ್ ಎಮ್. ಶ್ರೀ ಗೋಪಾಲ ಕೃಷ್ಣ ಭಜನಾ ಮಂಡಳಿ, ಉರುಂದಾಡಿ ಪಂಜಿಮೊಗರು ಇದರ ಅದ್ಯಕ್ಷರು ಸುಜಿತ್ ಕುಮಾರ್, ಯುವವಾಹಿನಿ (ರಿ.) ಕೂಳೂರು ಘಟಕದ ಅದ್ಯಕ್ಷರು ಶ್ರೀ ಲತೀಶ್, ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ ಇದರ ಅದ್ಯಕ್ಷರು ಶ್ರೀ ವಿಕ್ಟರ್ ಮೋರಸ್,ಲಯನ್ಸ್ ಕ್ಲಬ್ ಕುದುರೆಮುಖ ಇದರ ಕಾರ್ಯದರ್ಶಿ ನಾಗೇಶ್ ಕೆ., ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾವೂರು ಪ್ರಖಂಡದ ವಿಜಯ್, ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಇದರ ಸಂಯೋಜಕರು ಡಾ. ಆದ್ರ, ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಮಂಗಳೂರು ಡಾ. ಸಿಂಧು ಲಯನ್ಸ್ ಕ್ಲಬ್‌ನ ಚೈರ್ ಪೆರ್ಸೊನ್ ಶ್ರೀ ಎಸ್ ಶೀನ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು ೧೫೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಹಾಗೂ ಉಚಿತ ಔಷಧಿ ವಿತರಣೆಯನ್ನು ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ನಿರೂಪಣೆಯನ್ನು ಮಾಡಿದರು. ಹಾಗೂ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ಸ್ವಾಗತಿಸಿದರು, ಸಂಘದ ಸಿಬ್ಬಂದಿ ಶ್ರೀಮತಿ ಶ್ರುತಿ ಕುಮಾರಿ ಧನ್ಯವಾದ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು