10:11 PM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ‘ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ’ ವಿಶೇಷ ಪ್ರಶಸ್ತಿ ಪ್ರದಾನ

17/11/2025, 22:11

ಮಂಗಳೂರು(reporterkarnataka.com): ಅಖಿಲ ಭಾರತ ಸಹಕಾರ ಸಪ್ತಾಹ ೨೦೨೫ ಇದರ ಪ್ರಯುಕ್ತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.),
ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜರುಗಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ರವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ೨೦೨೫ ನೇ ಸಾಲಿನ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಿಗೆ ನೀಡಿ ಗೌರವಿಸಿದರು.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜ್ಯ ವಿಧಾನಸಭೆ ಸಭಾಧ್ಯಕ್ಷರಾದ ಶ್ರೀ ಯು.ಟಿ ಖಾದರ್ ಪರೀದ್, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಎ. ಸುವರ್ಣ, ಕರ್ನಾಟಕ ವಿಧಾನ ಪರಿಷತ್‌ನ ಸದಸ್ಯರಾದ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ, ಶ್ರೀ ಐವನ್ ಡಿಸೋಜ, ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ, ನಬಾರ್ಡ್ ನ ಮುಖ್ಯ ಮಹಾಪ್ರಬಂಧಕಾರದ ಡಾ. ಸುರೇಂದ್ರ ಬಾಬು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆ, ರಾಜ್ಯ ಸಹಕಾರ ಸಂಘಗಳ ನಿಭಂದಕರಾದ ಶ್ರೀ ಟಿ.ಎಚ್. ಎಂ. ಕುಮಾರ್, ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಪ್ರಸಾದ್ ರೆಡ್ಡಿ ಪಿ., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ರಮೇಶ್ ಎಚ್.ಎನ್., ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿಯಾದ ಶ್ರೀಮತಿ ಲಾವಣ್ಯಾ ಕೆ . ಆರ್. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಬಿ.ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎಸ್ ನವೀನ್, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಲಿಂಗರಾಜ್,
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶ್ರೀ ಟಿ.ಜಿ ರಾಜರಾಮ್ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ವಾದಿರಾಜ ಶೆಟ್ಟಿ, ಶ್ರೀ ಎಸ್.ಬಿ. ಜಯರಾಮ ರೈ, ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಎಸ್. ಬಿ. ಜಯರಾಮ ರೈ, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಎಮ್. ಮಹೇಶ್ ಹೆಗ್ಡೆ, ಶ್ರೀ ಮೋನಪ್ಪ ಶೆಟ್ಟಿ, ಶ್ರೀ ಜೈರಾಜ್ ಬಿ. ರೈ, ಶ್ರೀ ಕುಶಾಲಪ್ಪ ಗೌಡ, ಶ್ರೀ ಎಸ್.ಎನ್.ಮನ್ಮಥ, ಶ್ರೀ ರಾಜೇಶ್ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಕೆ. ಗೋಪಾಲಕೃಷ್ಣ ಭಟ್, ನಬಾರ್ಡ್ ಡಿಡಿಎಂ ಶ್ರೀಮತಿ ಸಂಗೀತಾ ಕರ್ತಾ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ಭಾಗವಹಿಸಿದ್ದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರು ಸ್ವಾಗತಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಶಶಿ ಕುಮಾರ್ ರೈ ಬಾಲ್ಯೊಟ್ಟು ರವರು ವಂದಿಸಿದರು. ಶ್ರೀ ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು