8:06 AM Friday27 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

24/02/2025, 19:34

ಬೆಳಗಾವಿ(reporterkarnataka.com): ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕುವೆಂಪು ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಸಚಿವರು, ಘಟನೆ ನಡೆದ ತಕ್ಷಣವೇ ನಾನು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ. ಇದರ ಮಧ್ಯೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದರು.
ನಾವು ಎಲ್ಲರೂ ಸ್ವರಾಜ್ಯದ ಬಗ್ಗೆ ಮಾತನಾಡುತ್ತೇವೆ. ನಾವು ಮೊದಲಿಗೆ ಭಾರತೀಯರು, ಕನ್ನಡಿಗರು, ಕರ್ನಾಟಕದ ಸುವರ್ಣ ಮಹೋತ್ಸವನ್ನು ಅದ್ದೂರಿಯಾಗಿ ಅಚರಿಸಿದ್ದೇವೆ. ಸ್ವರಾಜ್ಯದ ಬಗ್ಗೆ ಮಾತನಾಡುವಾಗ ಕೆಲವೊಂದು ಪುಂಡರು ಬಂದು ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು.
ನನ್ನ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ನಾವು ಭಾಷಾ ವಿವಾದವನ್ನೇ ಬೇರು ಸಮೇತ ಕಿತ್ತು ಹಾಕಿದ್ದೇವೆ. ನಮಗೆ ರಜೆ ದಿನಗಳು ಇವೆ. ಆದರೆ, ಸಾರಿಗೆ, ಆರೋಗ್ಯ, ಪೊಲೀಸ್ ಇಲಾಖೆ ನೌಕರರು ಹಬ್ಬದಿನಗಳಲ್ಲೂ ದುಡಿಯುತ್ತಾರೆ. ಇಂಥವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಮೊದಲಿಗೆ ನಾವು ಭಾರತೀಯರು. ದೇಶ ಅಂತ ಬಂದರೆ ಎಲ್ಲರೂ ಒಂದೇ. ನಾವು ನಾವುಗಳೇ ಜಗಳವಾಡುವುದು ಬೇಡ. ಎಲ್ಲರಿಗೂ ಭಾಷಾ ಅಭಿಮಾನ ಇರುತ್ತದೆ. ಈ ಪ್ರಕರಣವನ್ನು ಇಲ್ಲಿಗೆ ನಿಲ್ಲಿಸೋಣ ಎಂದು ಹೇಳಿದರು.
ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತು ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ಕೆಳಹಂತದ ಅಧಿಕಾರಿಗಳಿಂದ ಕೆಲವು ತಪ್ಪುಗಳಾಗಿವೆ. ಈ ಸಂಬಂಧ ನಾನು ಈಗಾಗಲೇ ಗೃಹ ಸಚಿವರು, ಡಿಐಜಿ ಅವರೊಂದಿಗೆ ಮಾತನಾಡಿದ್ದು, ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿರುವೆ ಎಂದರು.

* *ಗೃಹಲಕ್ಷ್ಮೀ ಹಣ ಶೀಘ್ರವೇ ಬಿಡುಗಡೆ:*
ವಿರೋಧ ಪಕ್ಷಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿವೆ. ಇನ್ನು 8 ದಿನಗಳಲ್ಲಿ ಯಜಮಾನಿಯರ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

* *ವೈದ್ಯರು ಅನುಮತಿ ಕೊಟ್ಟರೆ ಪ್ರಯಾಣ:*
ನಾಳೆ ಮತ್ತೊಂದು ಸಿಟಿ ಸ್ಕ್ಯಾನ್ ಮಾಡಿಸುತ್ತಿದ್ದು, ವೈದ್ಯರು ಅನುಮತಿ ನೀಡಿದರೆ ಬೆಂಗಳೂರಿಗೆ ಪ್ರಯಾಣಿಸುವೆ. ಮಾರ್ಚ್ 3 ರಿಂದ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

* *ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ವಿಶ್ರಾಂತಿಯ ಅಗತ್ಯವಿದೆ: ಸಚಿವ ರಾಮಲಿಂಗಾರೆಡ್ಡಿ*
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕುವೆಂಪುನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. “ನಾನು ಬೆಳಗಾವಿಗೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಆರೋಗ್ಯ ವಿಚಾರಿಸಲು ಬಂದಿರುವೆ. ಸಚಿವೆ ಲಕ್ಷ ಹೆಬ್ಬಾಳಕರ್ ಅವರಿಗೆ ಇನ್ನು ವಿಶ್ರಾಂತಿಯ ಅಗತ್ಯವಿದೆ’ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು