11:52 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದುಕುವ ಪ್ರಯತ್ನ: ಸುರತ್ಕಲ್ ಬಳಿ ಇಬ್ಬರಿಗೆ ಚೂರಿ ಇರಿತ

24/10/2025, 11:29

ಮಂಗಳೂರು(reporterKarnataka.com): ಸುರತ್ಕಲ್ ಸಮೀಪದ ಬಾರೊಂದರಲ್ಲಿ ಇಬ್ಬರ ಮೇಲೆ ತಂಡವೊಂದು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಇದರೊಂದಿಗೆ ಶಾಂತವಾಗಿದ್ದ ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದಕುವ ಪ್ರಯತ್ನ ನಡೆದಿದೆ.
ಕೃಷ್ಣಾಪುರದ ನಿವಾಸಿಗಳಾದ ನಿಜಾಮ್(23 ) ಹಾಗೂ ಮುರ್ಷಿದ್(18) ಇತರ ಇಬ್ಬರೊಂದಿಗೆ ಬಾರ್‌ಗೆ ತೆರಳಿದ್ದಾಗ ಅಲ್ಲಿಗೆ ಆಗಮಿಸಿ ತಂಡವೊಂದು ನಿಜಾಮ್ ಮತ್ತು ಮುರ್ಷಿದ್ ಅವರಿಗೆ ಚಾಕುವಿನಿಂದ ಇರಿದಿದೆ. ನಿಜಾಮ್ ಹೊಟ್ಟೆಗೆ ಚಾಕು ಹಾಕಿರುವುದರಿಂದ ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ನಿಜಾಮ್
ಜತೆಗಿದ್ದ ಮುರ್ಷಿದ್ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುರ್ಷಿದ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಈ ಘಟನೆ ಕುರಿತಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 307ನೇ ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ರಾತ್ರಿ ಆರೋಪಿಗಳ ಅಡಗಿದ್ದ ಸ್ಥಳಕ್ಕೆ ತೆರಳಿದರೂ ಅವರು ಆಗಲೇ ಪರಾರಿಯಾಗಿದ್ದರು. ಶುಕ್ರವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಆಸ್ಪತ್ರೆ ಭೇಟಿ ನೀಡಿ ತನಿಖೆ ಪರಿಶೀಲಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು