10:43 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಡ್ರಗ್ಸ್ ಮಾರಾಟ ಯತ್ನ: ತುಮಕೂರಿನ ಇಬ್ಬರು ನಿವಾಸಿಗಳ ಬಂಧನ; ಎಂಡಿಎಂ, ಗಾಂಜಾ ವಶ

02/12/2025, 22:36

ಮಂಗಳೂರು(reporterkarnataka.com):ಕಾವೂರು ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಫಲ್ಗುಣಿ ನದಿಯ ಬಳಿ ಗಾಂಜಾ ಹಾಗೂ ಎಂಡಿಎಂ ಮಾರಾಟ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತುಮಕೂರು ಪಿ.ಹೆಚ್. ಕಾಲೋನಿಯ 13 ನೇ ಕ್ರಾಸ್ ನ ನಿಮ್ರಾ ಮಸೀದಿ ಬಳಿಯ ನಿವಾಸಿ ಶಾಫಿ ಅಹ್ಮದ್ (40) ಹಾಗೂ ತುಮಕೂರು ಕೋತಿಪುರದ ಅಪೋಲೋ ಮೆಡಿಕಲ್ ರಸ್ತೆಯ ಅಜೀಝ್ ಮಂಜಿಲ್ ನ ನಿವಾಸಿ ಮೊಹಮ್ಮದ್ ಸಮೀರ್ (20) ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಂಗ್ರ-ಕೂಳೂರು ಎಂಬಲ್ಲಿ ಫಲ್ಗುಣಿ ನದಿಯ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಪಡೆದ ಪಣಂಬೂರು ಎಸಿಪಿ ಶ್ರೀಕಾಂತ್ ಕೆ.,ಕಾವೂರು ಪಿಐ ರಾಘವೇಂದ್ರ ಬೈಂದೂರ್ , ಕಾವೂರು
ಪಿಎಸ್ ಐ ಮಲ್ಲಿಕಾರ್ಜುನ್,ಎಎಸ್ ಐ ಚಂದ್ರಶೇಖರ್, ಸಿಬ್ಬಂದಿಗಳಾದ ಲರೆಜಿ ಎಂ,ಹಾಲೇಶ್ ನಾಯ್ಕ್, ರಿಯಾಜ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 70,000 ರೂ. ಮೌಲ್ಯದ
12 ಗ್ರಾಂ ಎಂಡಿಎಂ ಹಾಗೂ
ಸುಮಾರು 10,000 ಮೌಲ್ಯದ 275 ಗ್ರಾಂ ಗಾಂಜಾ, 2 ಮೊಬೈಲ್ ಪೋನ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳು ಗಾಂಜಾ ಮತ್ತು ಎಂ.ಡಿ.ಎಂ ನ್ನು ಬೆಂಗಳೂರಿನಲ್ಲಿ ನಿಗ್ರೋಗಳ ಬಳಿ ಖರೀದಿಸಿರುವುದಾಗಿ ತಿಳಿಸಿದ್ದಾರೆ.
ಆರೋಪಿ ಶಾಫಿ ಅಹ್ಮದ್ ಎಂಬಾತನ ಮೇಲೆ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು ಆತನು ಹಲವು ಪ್ರಕರಣಗಳಲ್ಲಿನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ನ್ಯಾಯಾಲಯವು ವಾರಂಟ್ ಹಾಗೂ ಪ್ರೊಕ್ಲಮೇಶನ್ ಜ್ಯಾರಿಗೊಳಿಸಿರುತ್ತದೆ.
.

ಇತ್ತೀಚಿನ ಸುದ್ದಿ

ಜಾಹೀರಾತು