ಇತ್ತೀಚಿನ ಸುದ್ದಿ
ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ
31/08/2025, 14:42

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmsil.com
ಗೂಡ್ಸ್ ವಾಹನವೊಂದರಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲು ಸಮೇತ ಸೋಮವಾರಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಟ್ಟಣದ ಚೌಡ್ಲು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಆಲೆಕಟ್ಟೆ ರಸ್ತೆ ನಿವಾಸಿ ಬಷೀರ್ ಎಂಬಾತನ ಪುತ್ರ ರಮೀಜ್ ನನ್ನು ಬಂಧಿಸಿ 600 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುದ್ದು ಮಾದೇವ ನೇತೃತ್ವದ ತಂಡಕ್ಕೆ ದೊರೆತ ಖಚಿತ ಮಾಹಿತಿ ಮೇರೆಗೆ ಸೋಮವಾರಪೇಟೆ ಹಾನಗಲ್ಲು ರಸ್ತೆಯ ಜಾನಕಿ ಕಾನ್ವೆಂಷನ್ ಹಾಲ್ ಬಳಿ ಈ ಕಾರ್ಯಾಚರಣೆ ನಡೆಸಲಾಗಿದೆ.