5:12 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಅತ್ತಿಗೆರೆ, ಕೊಟ್ಟಿಗೆಹಾರ ಸುತ್ತಮುತ್ತ ಕಾಡುಕೋಣಗಳ ಹಾವಳಿ, ಅರಣ್ಯ ಅಧಿಕಾರಿಗಳಿಂದ ಕೂಂಬಿಂಗ್ ಕಾರ್ಯಾಚರಣೆ

02/11/2023, 11:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ದೇವನಗೂಲ್, ಅತ್ತಿಗೆರೆ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ನಿತ್ಯ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.


ಬೆಳೆಗಾರರಾದ ಕಾರ್ತಿಕ್ ಅತ್ತಿಗೆರೆ ಮಾತನಾಡಿ ‘ ನಿತ್ಯ ಕಾಫಿ ತೋಟಗಳಲ್ಲಿ ಕಾಡುಕೋಣಗಳು ನಿರ್ಭೀತಿಯಿಂದ ಸಂಚರಿಸುತ್ತಿವೆ. ತೋಟ ಕಾರ್ಮಿಕರು ಕೂಡ ಕೆಲಸಕ್ಕೆ ಬರಲು ಭಯ ಪಡುವಂತಾಗಿದೆ. ಕಾಡಾನೆ, ಹುಲಿಗಳ ಕಾಟದಿಂದ ಈ ಭಾಗದ ಬಣಕಲ್, ಹೆಗ್ಗುಡ್ಲು, ಭಾರತೀಬೈಲ್ ಸುತ್ತಮುತ್ತ ಜನರು ರೋಸಿ ಹೋಗಿದ್ದಾರೆ . ಈಗ ಕಾಡುಕೋಣಗಳ ಹಾವಳಿಯಿಂದ ತೋಟಗಾರಿಕೆ ಕೃಷಿಗೂ ಹೊಡೆತ ಬಿದ್ದಂತಾಗಿದೆ’ ಎಂದರು. ಬುಧವಾರ ಅರಣ್ಯ ಅಧಿಕಾರಿ ಉಪವಲಯ ಅರಣ್ಯಾಧಿಕಾರಿ ಉಮೇಶ್ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ ಅತ್ತಿಗೆರೆ, ದೇವನಗೂಲ್ ಸುತ್ತಮುತ್ತ ಗುಡ್ಡದ ತೋಟಗಳಲ್ಲಿ ಪಟಾಕಿ ಸಿಡಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಪಟಾಕಿ ಸಿಡಿಸಿ ಕಾಡುಕೋಣಗಳನ್ನು ಕಾಡಿಗೆ ಅಟ್ಟಲು ಕಾರ್ಯಾಚರಣೆ ಆರಂಭಿಸಿದರು. ಉಪ ವಲಯ ಅರಣ್ಯ ಅಧಿಕಾರಿ ಉಮೇಶ್,ಗಸ್ತು ಅರಣ್ಯ ಪಾಲಕರಾದ ಮೋಸಿನ್, ಜಯಪ್ಪ ಅರಣ್ಯ ವೀಕ್ಷಕರಾದ ಕೃಷ್ಣಮೂರ್ತಿ ಗಿರೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು