7:24 AM Wednesday12 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಅತ್ಯಾಚಾರಕ್ಕೀಡಾದ ಬಾಲಕಿಯ ಫೋಟೋ ಪ್ರಕಟ: ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು, 25 ಸಾವಿರ ರೂ. ದಂಡ

02/09/2023, 20:47

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಅಪ್ರಾಪ್ತ ಬಾಲಕಿಯ ಫೋಟೋ ಪ್ರಕಟಿಸಿದ ಇಬ್ಬರು ಪತ್ರಕರ್ತರಿಗೆ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಸಜೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.
2019 ರಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕಣದ ಸುದ್ದಿಯನ್ನು ಸಿದ್ದಾಪುರದ ವಸಂತ್ ಕುಮಾರ್ ತಾನು ವರದಿಗಾರನಾಗಿದ್ದ ಕಾವೇರಿ ಟೈಮ್ಸ್ ಪತ್ರಿಕೆಯಲ್ಲಿ ಕಾನೂನುಬಾಹಿರವಾಗಿ ಬಾಲಕಿಯ ಫೋಟೋ ಬಳಸಿ ಸುದ್ದಿ ಮಾಡಿದ್ದರು.
ಅಪ್ರಾಪ್ತೆಯ ಸಹೋದರ ನೀಡಿದ ದೂರಿನ ಮೇರೆಗೆ ವಸಂತ್ ಹಾಗೂ ಕಾವೇರಿ ಟೈಮ್ಸ್ ಪತ್ರಿಕೆಯ ಮಾಲಿಕ ನಂಜಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಮುಗಿಸಿದ ವಿರಾಜಪೇಟೆಯ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಜಾತ ಅವರು ಆರೋಪಿಗಳಾದ ವಸಂತ್ ಹಾಗೂ ನಂಜಪ್ಪ ಎಂಬುವವರಿಗೆ ಒಂದು ವರ್ಷದ ಸಜೆ ಮತ್ತು 25,000ರೂ. ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು