10:10 AM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಅತ್ಯಧಿಕ ಮಾದಕ ವಸ್ತುಗಳ ಬಳಕೆ: ಕೇಂದ್ರ ಸರಕಾರದ ಪಟ್ಟಿಯಲ್ಲಿ ಉಡುಪಿ, ಕೊಡಗು ಸೇರಿ ರಾಜ್ಯದ 6 ಜಿಲ್ಲೆ

12/02/2022, 12:07

ಹೊಸದಿಲ್ಲಿ(reporterkarnataka.com): ಮಾದಕ ವಸ್ತುಗಳನ್ನು ಅತ್ಯಧಿಕವಾಗಿ ಬಳಕೆ ಮಾಡುತ್ತಿರುವ 272 ಜಿಲ್ಲೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದ್ದು, ಇದರಲ್ಲಿ ಕೊಡಗು, ಉಡುಪಿ ಸೇರಿದಂತೆ ಕರ್ನಾಟಕದ ಆರು ಜಿಲ್ಲೆಗಳು ಸೇರಿವೆ.

ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.

ದೇಶದ 272 ಜಿಲ್ಲೆಗಳನ್ನು ಅತ್ಯಧಿಕ ಮಾದಕವಸ್ತು ಬಳಸುವ ಜಿಲ್ಲೆಗಳೆಂದು ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಕರ್ನಾಕರದ ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಉಡುಪಿ ಮತ್ತು ರಾಮನಗರ ಜಿಲ್ಲೆಗಳೂ ಸೇರಿವೆ. ಈ ಜಿಲ್ಲೆಗಳಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ನಶೆ ಮುಕ್ತ ಭಾರತ ಅಭಿಯಾನದಡಿ ಮಾದಕವಸ್ತು ವ್ಯಸನಿಗಳನ್ನು ಗುರುತಿಸಿ ಸ್ವಯಂಸೇವಕರು ಸಮಾಲೋಚನೆ ನಡೆಸಲಿದ್ದು, ಅವರನ್ನು ವ್ಯಸನ ಮುಕ್ತರನ್ನಾಗಿಸಲು ಒತ್ತು ನೀಡುವರು. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಗಳೂ ಈ ಕಾರ್ಯಕ್ಕೆ ನೆರವಾಗಲಿದ್ದು, ಸಹಜ ಜೀವನಕ್ಕೆ ಮರಳುವಂತೆ ವ್ಯಸನಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು