6:54 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆಗಸ್ಟ್‌ 12ರಂದು ಮಂಗಳೂರು ಪುರಭವನದಲ್ಲಿ ಭ್ರಾಮರೀ ಯಕ್ಷವೈಭವ: ಕೃಷ್ಣ ಗಾಣಿಗರಿಗೆ ಯಕ್ಷಮಣಿ ಪ್ರಶಸ್ತಿ

08/08/2023, 12:04

ಮಂಗಳೂರು(reporterkarnataka.com) :ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ಆಗಸ್ಟ್ 12 ಶನಿವಾರದಂದು ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರನೇ ವರ್ಷದ ಭ್ರಾಮರೀ ಯಕ್ಷವೈಭವ – 2023 ಜರಗಲಿದೆ.
ಸಂಜೆ 7 ರಿಂದ ಸಭಾ ಕಾರ್ಯಕ್ರಮ ಜರಗಲಿದ್ದು .ಹಿರಿಯ ಯಕ್ಷಗಾನ ವಿದ್ವಾಂಸ,ವಿಮರ್ಶಕ ಡಾ| ಎಂ ಪ್ರಭಾಕರ ಜೋಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ತುಳು ಸಂಘ ಬರೋಡಾದ ಅಧ್ಯಕ್ಷ ಶಶಿಧರ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್,ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಉದ್ಯಮಿ ಚಂದ್ರಶೇಖರ ಮಾಡ ಕುದ್ರಾಡಿಗುತ್ತು ಭಾಗವಹಿಸಲಿದ್ದಾರೆ.
ಹಿರಿಯ ಯಕ್ಷಗಾನ ಕಲಾವಿದ ಕೋಡಿ ಕೃಷ್ಣ( ಕುಷ್ಟ)ಗಾಣಿಗ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಭ್ರಾಮರೀ ಯಕ್ಷಸೇವಾಪುರಸ್ಕಾರವನ್ನು ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘ ಮಂಗಳೂರು ಹಾಗೂ ಕಟೀಲು ಮೇಳದ ನೇಪಥ್ಯ ಕಲಾವಿದ ವಿಠಲ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಗುವುದು. ರಾತ್ರಿ 9 ರಿಂದ ಚೆಂಡೆ ಜುಗಲ್‌ಬಂದಿ, ನಾಡಿನ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಶರಣ ಸೇವಾರತ್ನ,ರಾಣಿ ಶಶಿಪ್ರಭೆ,ಶ್ರೀ ದೇವಿ ಕೌಶಿಕೆ ಎಂಬ ಯಕ್ಷಗಾನ ಜರಗಲಿದ್ದು.ಈ ಎಲ್ಲಾ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು