ಇತ್ತೀಚಿನ ಸುದ್ದಿ
ಆ.20: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಕದ್ರಿಯಲ್ಲಿ ಬೃಹತ್ ಪ್ರತಿಭಟನಾ ಸಭೆ
16/08/2023, 15:00
ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 20ರಂದು ನಗರದ ಕದ್ರಿ ಬಯಲು ರಂಗ ಮಂದಿರದ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ಸಂಜೆ 4 ಗಂಟೆಗೆ ನಡೆಯಲಿದೆ.
ಸೌಜನ್ಯ ಹತ್ಯೆ ನಡೆದು 11 ವರ್ಷಗಳು ಕಳೆದರೂ ನೈಜ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಕಿಕೊಳ್ಳಲಾಗಿದೆ.
ಅಂದು ಸಂಜೆ 3.30 ಗಂಟೆಗೆ ಕದ್ರಿ ದೇವಳ ಆವರಣದಿಂದ ಕದ್ರಿ ಬಯಲು ರಂಗ ಮಂದಿರದವರೆಗೆ ಪಾದಯಾತ್ರೆ ನಡೆಯಲಿದೆ. ಅಲ್ಲಿ ಪ್ರತಿಭಟನಾಕಾರರು ಸಮಾವೇಶಗೊಂಡು ಪ್ರತಿಭಟನಾ ಸಭೆ ನಡೆಯಲಿದೆ. ಸಭೆಯಲ್ಲಿ ಸೌಜನ್ಯ ಅವರ ತಾಯಿ- ತಂದೆ, ಸೋದರ- ಸೋದರಿ, ಮಾವ, ಸೌಜನ್ಯ ಪರ ಹೋರಾಟ ನಡೆಸಿಕೊಂಡು ಬಂದ ತಿಮರೋಡಿ ಮಹೇಶ್ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ಮುಂತಾದವರು ಭಾಗವಹಿಸಲಿದ್ದಾರೆ.