1:12 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಅ.22ರಂದು ಬ್ರಹ್ಮಾವರದಲ್ಲಿ ಕೃಷಿ ಮಹೋತ್ಸವ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ

20/10/2022, 10:47

ಬ್ರಹ್ಮಾವರ(reporterkarnataka.com): ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಇದೇ ಬರುವ ಅಕ್ಟೋಬರ್ 22ರಂದು 10 ಗಂಟೆಗೆ ಕೃಷಿ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ್ ಅವರು, ಈ ಕಾರ್ಯಕ್ರಮವನ್ನು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮೀನುಗಾರಿಕೆ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಸಚಿವ ವಿ.ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ ಮೊದಲಾದವರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಧನಂಜಯ ಬಿ., ಬ್ರಹ್ಮಾವರ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕೆ.ವಿ. ಸುಧೀರ್ ಕಾಮತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು