7:59 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅ.27- 29: ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ‘ಕೋಡ್ ಮೀಟ್-2023’

26/10/2023, 16:35

ಮಂಗಳೂರು(reporterkarnataka.com): ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಅ.೨೭ ರಿಂದ ೨೯ ರವರೆಗೆ ‘ಕೋಡ್ ಮೀಟ್-೨೦೨೩’ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟಾರ್ ಡಾ. ಅನಿಲ್ ಕುಮಾರ್ ಹೇಳಿದರು.
ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅ.೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯದ ಓಪನ್ ಏರ್ ಅಡಿಟೋರಿಯಂನಲ್ಲಿ ಉದ್ಘಾಟಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಮತ್ತು ಎ ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಡಾ. ಎ. ಶ್ರೀನಿವಾಸ್ ರಾವ್, ಇನ್ಫೋಸಿಸ್ ವ್ಯವಸ್ಥಾಪಕ ರೋಹಿತ್ ಪೈ, ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಎ. ವಿಜಯಲಕ್ಷ್ಮೀ ಆರ್. ರಾವ್, ಪ್ರೊ. ಎ. ಮಿತ್ರ ಎಸ್. ರಾವ್ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ೩೫೦ಕ್ಕೂ ಹೆಚ್ಚಿನವರು ಭಾಗವಹಿಸಲಿದ್ದು, ಮೂರು ವಿಭಾಗಗಳಾಗಿ ವಿಂಗಡಿಸಿದ್ದು, ಪ್ರಥಮ, ದ್ವಿತೀಯ ಹಾಗೂ ಮೂರನೇ ಬಹುಮಾನವನ್ನು ವಿತರಿಸಲಾಗುವುದು. ಒಟ್ಟು ೧ ಲಕ್ಷ ರೂ.ದ ಬಹುಮಾನವನ್ನು ವಿತರಿಸಲು ತಿರ್ಮಾನಿಸಿದ್ದು, ೯ ಜನರಿಗೆ ಹಂಚಲಾಗುವುದು, ಇದರೊಂದಿಗೆ ಅವರಿಗೆ ಉಪಯುಕ್ತವಾಗುವಂತಹ ಆಕರ್ಶಕ ಕೂಪನ್‌ಗಳನ್ನು ಕೂಡ ನೀಡಲಾಗುವುದು ಎಂದು ಹೇಳಿದರು.



ಶ್ರೀನಿವಾಸ ವಿಶ್ವವಿದ್ಯಾಲಯದ ಎಸ್.ಯು.ಐ.ಇ.ಟಿ ಡೀನ್ ಡಾ. ಥಾಮಸ್ ಪಿಂಟೋ, ವಿಶ್ವವಿದ್ಯಾಲಯದ ವೆಬ್‌ಫ್ಲೋ ಕಮ್ಯೂನಿಟಿ ಮಾರ್ಗದರ್ಶಕಿ ಡಾ. ಸುಷ್ಮಾ ಅಕ್ಕರಾಜು, ಪ್ರೊಫೆಸರ್ ಡಾ. ರಂಜಿತ್ ಕೋಲ್ಕಡ, ವಿದ್ಯಾರ್ಥಿಗಳಾದ ಸಿದ್ದಾರ್ಥ್, ಅಬ್ರಾಬ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು