3:00 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಅಗಸ್ಟ್‌ 27ರ ವರೆಗೆ ಉತ್ತರ, ಈಶಾನ್ಯ ಭಾರತದಲ್ಲಿ ಭಾರಿ ಮಳೆ ನಿರೀಕ್ಷೆ: ಹವಾಮಾನ ಇಲಾಖೆ

24/08/2021, 09:52

ನವದೆಹಲಿ(reporterkarnataka.com) : ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ಸೇರಿದಂತೆ ಈಶಾನ್ಯ ಭಾರತ, 

ಹಿಮಾಲಯ ಪ್ರಾಂತ್ಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪೂರ್ವ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಬಿಹಾರದಲ್ಲಿ ಆ.27ರ ವರೆಗೂ ಬಿರುಸಿನ ಭಾರೀ ಮಳೆಯಾಗಲಿದೆ. ಆಗಸ್ಟ್ 23 ರಿಂದ 25 ರವರೆಗೆ ಅಸ್ಸಾಂ ಮತ್ತು ಮೇಘಾಲಯ, ಅಲ್ಲದೇ ಆಗಸ್ಟ್ 23, 26 ಮತ್ತು 27 ರಂದು ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ವ್ಯಾಪಕವಾದ ಮಳೆಯಿಂದಾಗಿ ವ್ಯಾಪಕ ಮಳೆ ಸುರಿಯಲಿದೆ. ಇನ್ನು ರಾಜಸ್ಥಾನದಲ್ಲಿ ಅಗಸ್ಟ್‌ 27ರ ವರಗೆ ಮಳೆಯಾಗಲಿದೆ ಎಂದು ಹೇಳಿದೆ.

ಕಳೆದ ಕೆಲವು ದಿನಗಳಿಂದಲೂ ಕರ್ನಾಟಕ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಅಲ್ಲದೇ ಇನ್ನೆರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದ್ರಲ್ಲೂ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು