7:40 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಆ.27ರಂದು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಉದ್ಘಾಟನೆ

25/08/2023, 11:50

ಉಳ್ಳಾಲ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಉಳ್ಳಾಲ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಆ.27ರಂದು ಮಧ್ಯಾಹ್ನ 3.00 ಗಂಟೆಗೆ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆಯಲಿದೆ.
ತೊಕ್ಕೊಟ್ಟುವಿನಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್.ಕೊಣಾಜೆ ಈ ವಿಷಯ ತಿಳಿಸಿದರು.
ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಪತ್ರಕರ್ತರ ಕ್ಷೇಮಾಭಿವೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗ್ರಾಮಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಅಧ್ಯಕ್ಷ ಶಿವಾನಂದ ತಗಡೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೈಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷರಾದ ಹನೀಫ್ ಹಾಜಿ , ಪೆರ್ಮನ್ನೂರು ಸಂತ ಸೆಬೆಸ್ತಿಯನ್ನರ ಚರ್ಚಿನ ಧರ್ಮಗುರುಗಳಾದ ಫಾ. ಸಿಪ್ರಿಯನ್ ಮೊಂತೇರೊ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ , ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಎ.ಕೆ.
ಎಂ. ಅಶ್ರಫ್, ವಿಧಾನಪರಿಷತ್ ಸದಸ್ಯರುಗಳಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಪ್ರತಾಪಸಿಂಹ ನಾಯಕ್, ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಯೆನೆಪೋಯ ವಿ.ವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ, ಕಣಚೂರು ಸಮೂಹ ಸಂಸ್ಥೆಯ ಅಧ್ಯಕ್ಷ ಯು.ಕಣಚೂರು ಮೋನು , ನಿಟ್ಟೆ ವಿವಿ ಆಡಳಿತ ವಿಭಾಗದ ಉಪಕುಲಾಧಿಪತಿ ವಿಶಾಲ್ ಹೆಗ್ಡೆ , ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಂ ಭಟ್, ಶಿವಾಸ್ ಮುಂಬೈ ಆಡಳಿತ ನಿರ್ದೇಶಕ ಶಿವರಾಮ್ ಭಂಡಾರಿ, ಕೋಟೆಕಾರು ವ್ಯ.ಸೇ.ಸ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನಕೋಟೆಕಾರುಗುತ್ತು , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ,‌ಕನ್ನಡಿಗ ಪತ್ರಕರ್ತರ ಸಂಘದ ಮಹಾರಾಷ್ಟ್ರ ಅಧ್ಯಕ್ಷ ರೋನ್ಸ್ ಬಂಟ್ವಾಳ ಮೊದಲಾದವರು ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ: ಮದ್ಯಾಹ್ನ 3 ಗಂಟೆಯಿಂದ ಪತ್ರಕರ್ತರು ಹಾಗೂ ಖ್ಯಾತ ಗಾಯಕರಿಂದ ಕರೋಕೆ ಸಂಗೀತ ವೈಭವ, ಸಂಘದ ಸದಸ್ಯರ ಹಾಗೂ ಮಕ್ಕಳ ಭರತನಾಟ್ಯ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಉಳ್ಳಾಲ ತಾಲೂಕು ಘಟಕದ ಪ್ರ.ಕಾ. ಶಶಿಧರ್ ಪೊಯ್ಯತ್ತಬೈಲ್, ಪತ್ರಕರ್ತರಾದ ಸತೀಶ್ ಪುಂಡಿಕಾಯಿ, ದಿನೇಶ್ ನಾಯಕ್, ಡಾ.ಸತೀಶ್ ಕೊಣಾಜೆ, ಗಣೇಶ್ ತಲಪಾಡಿ, ಆಸೀಫ್ ಬಬ್ಬುಕಟ್ಟೆ, ಮೋಹನ್ ಕುತ್ತಾರ್, ಶಿವಾಂಕರ್, ರಜನಿಕಾಂತ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ನೇರಪ್ರಸಾರ ಅಬ್ಬಕ್ಕ ಟಿವಿ, ಪೊಸಕುರಲ್, ಚಾನೆಲ್‌ ನಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು