5:18 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಆಗಸ್ಟ್ 1ರಂದು ವ್ಯಸನ ಮುಕ್ತ ದಿನ ಆಚರಣೆಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಸೂಚನೆ

27/07/2024, 18:41

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ನಗರದ ಪದವಿ ಕಾಲೇಜಿನಲ್ಲಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಈ ನಿರ್ಣಯ ಕೈಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮ.ನಿ.ಪ್ರ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಗೌರವ ಅರ್ಪಿಸಿ, ನಂತರ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ಜಾಗೃತಿ ಜಾಥಾ ನಡೆಯಲಿದ್ದು,ಈ ನಿಟ್ಟಿನಲ್ಲಿ ಸಂಬAಧಿಸಿದ ಎಲಾಖೆಗಳ ಅಧಿಕಾರಿಗಳು ತಮಗೆ ವಹಿಸಿದ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು. ಅದರಂತೆ ಅಂದು ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸಹಯೋಗದಲ್ಲಿ ವ್ಯಸನಮುಕ್ತ ಶಿಬಿರ ಏರ್ಪಡಿಸಲು ಅವರು ಸೂಚಿಸಿದರು.
ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಆ.1ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಿ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜಾಗೃತಿ ಜಾಥಾ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಡಿವೈಎಸ್ಪಿ ಅರುಣಕುಮಾರ ಕೋಳೂರು, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು