6:06 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅ.16ರಂದು ದಸರಾ ಬಹುಭಾಷಾ ಕವಿಗೋಷ್ಠಿ: ಕೊರಗ, ಕುಂದ ಕನ್ನಡ, ತುಳು ಸಹಿತ 12 ಭಾಷೆಗಳ ಕವಿತಾ ವಾಚನ

12/10/2023, 21:27

ಮಂಗಳೂರು(reporterkarnataka.com): ತುಳು ಪರಿಷತ್ ವತಿಯಿಂದ ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಗರದ ಬಂಟ್ಸ್ ಹಾಸ್ಟೆಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ಅ.16ರಂದು ಅಪರಾಹ್ನ 2.00 ಗಂಟೆಗೆ ನಡೆಯಲಿದೆ.
ಎರಡನೇ ವರ್ಷದ ಈ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಅವರು ಉದ್ಘಾಟಿಸುವರು.ಅಧ್ಯಕ್ಷತೆಯನ್ನು ನಿವೃತ್ತ ಉಪನ್ಯಾಸಕಿ ಹಾಗೂ ಲೇಖಕಿ ಡಾ.ಮೀನಾಕ್ಷಿ ರಾಮಚಂದ್ರ ವಹಿಸುವರು.
ಬಹುಭಾಷಾ ಕವಿಗೋಷ್ಠಿಯಲ್ಲಿ ತುಳುನಾಡಿನ 12 ಭಾಷೆಗಳಲ್ಲಿ ಕವಿತಾ ವಾಚನ ನಡೆಯಲಿದೆ.
ತುಳು, ಕನ್ನಡ, ಬ್ಯಾರಿ, ಅರೆಭಾಷೆ, ಕುಂದ ಕನ್ನಡ, ಹವ್ಯಕ ಕನ್ನಡ , ಶಿವಳ್ಳಿ ತುಳು, ಸ್ಥಾನಿಕ ತುಳು , ಕೊರಗ ಭಾಷೆ, ಜಿ.ಎಸ್. ಬಿ ಕೊಂಕಣಿ , ಕ್ರೈಸ್ತ ಕೊಂಕಣಿ , ಮಳಯಾಲಂ ಭಾಷೆಗಳ ಕವಿಗಳು ಕವಿತೆ ವಾಚಿಸುವರು. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕವಿಗಳು ಈ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸುವರು ಎಂದು ತುಳು ಪರಿಷತ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು