ಇತ್ತೀಚಿನ ಸುದ್ದಿ
ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
23/10/2025, 20:43
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಗ್ರಾಮದ ಅಬ್ಬಿ ಮಠ ಬಾಚಳ್ಳಿ ಯಲ್ಲಿ ಅಸ್ಸಾಂ ಮೂಲದ ಮೂವರು ಕಾರ್ಮಿಕರು ಆಟೋ ಚಾಲಕನ ಮೇಲೆ ಗಂಭೀರ ವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಆಟೋ ಬಾಡಿಗೆ ನೆಪದಲ್ಲಿ ಗಲಾಟೆ ನಡೆದಿದ್ದು, ಮೂವರು ಯುವ ಕಾರ್ಮಿಕರು ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರೆ. ಕಾರ್ಮಿಕರು ಅಬ್ಬಿ ಮಠದ ರಾಮ್ಮಪ್ಪ ಎಂಬುವವರ ತೋಟದಲ್ಲಿ ಕೆಲಸ ಮಾಡಿ ಕೊಂಡಿದ್ದರು ಎಂದು ತಿಳಿದು ಬಂದಿದೆ. ಸದ್ಯ ಆಟೋ ಚಾಲಕನನ್ನು ಸೋಮವಾರಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.














