8:42 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಆಟೋದಲ್ಲಿ ಡ್ರಗ್ಸ್ ಮಾರಾಟ: ಮಂಗಳೂರು ಸಿಸಿಬಿ ಪೊಲೀಸರಿಂದ ಆರೋಪಿ ಸೆರೆ; 1.55 ಲಕ್ಷ ಮೌಲ್ಯದ ಸೊತ್ತು ವಶ

19/01/2024, 20:38

ಮಂಗಳೂರು(reporterkarnataka.com): ನಗರ ಪಳ್ನೀರು ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಬಜಾಲ್ ನಿವಾಸಿ ತೌಸೀಫ್ ಅಲಿಯಾಸ್ ತೌಚಿ (23) ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.


ಆರೋಪಿಯಿಂದದ 45 ಸಾವಿರ ರೂ ಮೌಲ್ಯದ 9 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ
ಒಟ್ಟು ಮೌಲ್ಯ 1.55 ಲಕ್ಷ ರೂ ಆಗಬಹುದು ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು