11:48 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಆಟೋರಿಕ್ಷಾ ದರ ಏರಿಕೆ: ಮೊದಲ 1.5 ಕಿಮೀ.ಗೆ ಕನಿಷ್ಠ 35 ರೂ. ಬಾಡಿಗೆ

25/11/2022, 21:18

ಮಂಗಳೂರು(reporter Karnataka.com): ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ರಿಕ್ಷಾ ಚಾಲನೆಯ ವಿವಿಧ ಅಂಶಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಆಟೋರಿಕ್ಷಾ ಚಾಲಕರ, ಮಾಲಕರ ಹಾಗೂ ಆಟೋ ರಿಕ್ಷಾಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಹಿಂದೆ 2020ರ ಫೆಬ್ರವರಿ 27ರಂದು ನಿಗದಿ ಪಡಿಸಿದ ಆಟೋರಿಕ್ಷಾ ದರಗಳನ್ನು ಪುನರ್ ಪರಿಷ್ಕರಿಸಿ, 2022ರ ಡಿಸೆಂಬರ್ 01ರಿಂದ ಜಾರಿಗೆ ಬರುವಂತೆ ನಿಗದಿ ಪಡಿಸಿದೆ.

ಮೊದಲ 1.5 ಕಿ.ಮೀ. ಕನಿಷ್ಠ ದರ 35 ರೂ.ಗಳು (ಗರಿಷ್ಠ 3 ಜನ ಪ್ರಯಾಣಿಕರು), ನಂತರದ ಪ್ರತಿ ಕಿ.ಮೀ. ದರ 20 ರೂ.ಗಳು (ಗರಿಷ್ಠ 3 ಜನ ಪ್ರಯಾಣಿಕರು), ಕಾಯುವ ದರ ಮೊದಲ 15 ನಿಮಿಷ ಉಚಿತ, ನಂತರದ 15 ನಿಮಿಷದವರೆಗೆ 5 ರೂ.ಗಳು. ಪ್ರಯಾಣಿಕರ ಸರಕಿಗೆ (ಲಗೇಜ್) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜೊತೆ ಇರಬೇಕು. ಮೊದಲ 20 ಕಿ.ಗ್ರಾಂ. ಗಳಿಗೆ ಉಚಿತ ಹಾಗೂ ನಂತರದ ಪ್ರತಿ 10 ಕಿ.ಗ್ರಾಂ. ಅಥವಾ ಅದರ ಭಾಗಕ್ಕೆ 5 ರೂ.ಗಳು. ರಾತ್ರಿ ವೇಳೆ ದರ 10 ಗಂಟೆಯಿಂದ ಬೆಳಗಿನ ಜಾವ 5ರ ವರೆಗೆ ಮಾತ್ರ ಈ ಮೇಲಿನ ದರದ ಒಂದೂವರೆ ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶವಿದೆ.

2022ರ ಡಿಸೆಂಬರ್ 1ರಿಂದ ಒಂದು ತಿಂಗಳೊಳಗೆ ಎಲ್ಲಾ ಆಟೋ ರಿಕ್ಷಾ ಫೇರ್ ಮೀಟರ್‍ ಗಳಲ್ಲಿ ಸತ್ಯಾಪನೆ ಮಾಡಿಸಿ ಮುದ್ರೆ ಹಾಕಿಸಿಕೊಂಡು ತೂಕ ಮತ್ತು ಮಾಪನ ಶಾಸ್ತ್ರ ಇಲಾಖೆಯಿಂದ ದೃಢೀಕರಿಸಿಕೊಳ್ಳಬೇಕು. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಅನುಮೋದಿಸಿದ ದರ ಪಟ್ಟಿಯನ್ನು ಪ್ರತಿಯೊಂದು ಆಟೋರಿಕ್ಷಾಗಳಲ್ಲಿಯೂ ಪ್ರದರ್ಶಿಸಬೇಕು. ಆಟೋರಿಕ್ಷಾ ಚಾಲಕ ಮಾಲೀಕರು ತಮ್ಮ ಆಟೋ ರಿಕ್ಷಾಗಳ ಪ್ಲಾಗ್ ಮೀಟರ್‍ ಮರು ನಿಗದಿ ಪಡಿಸಿದ ದರವನ್ನು ರಿಕ್ಯಾಲಿಬರೇಷನ್ ಹಾಗೂ ಸೀಲ್ ಮಾಡಿಸಿಕೊಂಡು ಪ್ರಯಾಣಿಕರಿಂದ ಪ್ರಯಾಣಕ್ಕೆ ತಕ್ಕಂತೆ ಪರಿಷ್ಕರಿಸಿದ ಮೀಟರ್ ದರವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಪ್ರಯಾಣಿಕರು ಪ್ರಯಾಣಿಸುವ ಸ್ಥಳಗಳಿಗೆ ಹೋಗಲು ನಿರಾಕರಿಸಿದಲ್ಲಿ ಹಾಗೂ ಸಾರ್ವಜನಿಕ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದಲ್ಲಿ, ಅಂತಹ ಚಾಲಕರ ವಿರುದ್ಧ ಕಾನೂನಿನಂತೆ ದಂಡ ವಿಧಿಸುವುದು, ಪರವಾನಿಗೆ ಅಮಾನತ್ತು, ರದ್ದತಿ ಕುರಿತು ಕ್ರಮ ಕೈಗೊಳ್ಳುವುದು ಹಾಗೂ ಇತರೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಅಧಿಕ ದರ ವಸೂಲು ಮಾಡಿದಲ್ಲಿ ಮಂಗಳೂರು ಕಚೇರಿ ದೂ.ಸಂಖ್ಯೆ: 0824-2220577, ಪುತ್ತೂರು ದೂ.ಸಂ: 08251-230729, ಹಾಗೂ ಬಂಟ್ವಾಳ ದೂ.ಸಂ: 08255-280504
ಅವರಿಗೆ ಸಾರ್ವಜನಿಕರು ದೂರುಗಳನ್ನು ನೀಡುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು