5:09 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಆಟೋರಿಕ್ಷಾದಡಿ ಸಿಲುಕಿ ಒದ್ದಾಡುತ್ತಿದ್ದ ಹೆತ್ತಬ್ಬೆಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

10/09/2024, 21:54

ಮಂಗಳೂರು(reporterkarnataka.com): ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.
7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು