2:29 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಅವಿರತ ಪ್ರತಿಷ್ಠಾನದಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ

07/07/2024, 18:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅವಿರತ ಪ್ರತಿಷ್ಠಾನದ ವತಿಯಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಅವಿರತ ಪ್ರತಿಷ್ಠಾನದ ಪರವಾಗಿ ಮಾತನಾಡಿದ ಸುಜ್ಞಾನ್ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಿರತ ಪ್ರತಿಷ್ಠಾನ ನಾಡಿನೆಲ್ಲೆಡೆ ತನ್ನದೇ ಕೊಡುಗೆ ನೀಡುತ್ತಾ ಬಂದಿದ್ದು, ಅದರಲ್ಲಿ ನೋಟ್ ಬುಕ್ ವಿತರಣೆಯು ಪ್ರಮುಖ ಕಾರ್ಯಕ್ರಮವಾಗಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕರಾದ ಶಿವಮೂರ್ತಿ ಮಾತನಾಡಿ ಅವಿರತ ಪ್ರತಿಷ್ಠಾನದವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೇ ಬಣಕಲ್ ವಿಲೇಜ್ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಸೇರಿದಂತೆ ತಂತ್ರಜ್ಞಾನ ಆಧಾರಿತ ಆಧುನಿಕ ಶಿಕ್ಷಣ ಕ್ರಮಗಳನ್ನು ಅಳವಡಿಸಿ ಕೊಂಡಿದ್ದು ಬಣಕಲ್ ಸುತ್ತಮುತ್ತಲಿನ ಜನರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವ ಮೂಲಕ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಮನವಿ ಮಾಡಿದರು.
ಶಾಲಾ ಶಿಕ್ಷಕರಾದ ಪೂರ್ಣೇಶ್ ಮತ್ತಾವರ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು