ಇತ್ತೀಚಿನ ಸುದ್ದಿ
ಅವ್ಯಾಹತ ಬಿರುಸಿನ ಗಾಳಿ ಮಳೆ: ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಶಾಲಾ- ಕಾಲೇಜುಗಳಿಗೆ ರಜೆ
26/07/2024, 22:37
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಅವ್ಯಾಹತ ಬಿರುಸಿನ ಗಾಳಿ ಮಳೆಯ ಹಿನ್ನಲೆಯಲ್ಲಿ
ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ನಾಳೆ(ಜು. 27) ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು ,ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಹಶೀಲ್ದಾರ್ ಜಕ್ಕಣ್ಣ ಗೌಡರ್ ವಿನಂತಿಸಿದ್ದಾರೆ.