ಇತ್ತೀಚಿನ ಸುದ್ದಿ
ಅವ್ಯಾಹತ ಮಳೆ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಸೆಪ್ಟೆಂಬರ್ 15ರ ವರೆಗೆ ನಿಷೇಧ
26/07/2023, 23:16
ಕಾರ್ಕಳ(reporterlarnataka.com): ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಭಾರೀ ಮಳೆ ಮತ್ತು ಭಾರೀ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ಧಾರಿ 169 A ಯ ಆಗುಂಬೆ ಘಾಟಿಯ 6,7 ಮತ್ತು 11 ನೇ ತಿರುವಿನಲ್ಲಿ ಸಣ್ಣ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಆತಂಕ ಉಂಟಾಗಿದೆ. ಹೀಗಾಗಿ ಜುಲೈ 27 ರಿಂದ ಸೆಪ್ಟೆಂಬರ್ 15 ರ ವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮಾರ್ಗ 1. ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಮಾಳಘಾಟ್- ಕಾರ್ಕಳ- ಉಡುಪಿ ಮಾರ್ಗ 2. ತೀರ್ಥಹಳ್ಳಿ- ಮಾಸ್ತಿಕಟ್ಟೆ- ಸಿದ್ದಾಪುರ- ಕುಂದಾಪುರ- ಉಡುಪಿ ಬಳಸಬಹುದಾಗಿದೆ ಎಂದು ಆದೇಶ ದಲ್ಲಿ ತಿಳಿಸಿದ್ದಾರೆ.