ಇತ್ತೀಚಿನ ಸುದ್ದಿ
ಅವ್ಯಾಹತ ಮಳೆ; ದ.ಕ. ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ಇಂದು ರಜೆ; ಜಿಲ್ಲಾಧಿಕಾರಿ ಘೋಷಣೆ
05/07/2022, 08:54
ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ದ.ಕ.ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಸಾರಲಾಗಿದೆ
ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ5ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, Diploma/ITI ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಸಾರಿದ್ದಾರೆ.