ಇತ್ತೀಚಿನ ಸುದ್ದಿ
ಅವ್ಯಾಹತ ಮಳೆ: ಕೊಪ್ಪದ ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ; ಸಂಪರ್ಕ ಕಡಿತ, ಜನ ಸಾಮಾನ್ಯರ ಪರದಾಟ
12/08/2022, 20:46
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಪ್ಪ ತಾಲೂಕಿನ ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ, ಸಂಪರ್ಕ ಕಡಿತಗೊಂಡಿದೆ.
ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿಯಿಂದ ಹತ್ತನೇ ತರಗತಿವರೆಗೆ ತಹಶೀಲ್ದಾರ್ ರಜೆ ನೀಡಿದ್ದಾರೆ. ಮಾಧ್ಯಮಗಳಿಗೆ ರಜೆ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್ ನಾಗರಾಜ್, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದರು.
ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ-ಗಾಳಿ ಮುಂದುವರಿದಿದೆ. ಹೆಗ್ಗಾರು ಕೂಡಿಗೆಯಲ್ಲಿ ರಸ್ತೆ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ.
ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಗ್ರಾಮದ ಮೇಗೂರು, ಕೊಗ್ರೆ, ತಲವಾನೆ ಸೇರಿ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.
ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿ ವಿದ್ಯಾರ್ಥಿಗಳು, ಜನಸಾಮಾನ್ಯರ ಪರದಾಟ ನಡೆಸಬೇಕಾಯಿತು. ಸ್ಥಳೀಯರು ಪಿಡಬ್ಲ್ಯುಡಿ ಇಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು.