ಇತ್ತೀಚಿನ ಸುದ್ದಿ
ಅವ್ಯಾಹತ ಮಳೆ : ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
19/05/2022, 13:01
ಉಡುಪಿ(reporterkarnataka.com): ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೂ ಎರಡು ದಿನ ಮುಂದುವರೆಯಲಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.














