6:20 PM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ

ಇತ್ತೀಚಿನ ಸುದ್ದಿ

ಅವ್ಯವಸ್ಥೆಯ ಆಗರವಾದ ಕಲಬುರಗಿಯ ಹಲಕರ್ಟಿ ಗ್ರಾಮ!: 12 ಜನ ಚುನಾಯಿತ ಸದಸ್ಯರಿದ್ದರೂ ಗ್ರಾಮದಲ್ಲಿ ಮೂಲ ಸೌಕರ್ಯಗಳೇ ಇಲ್ಲ!

15/07/2024, 21:02

ಶಿವು ರಾಠೋಡ ಚಿತ್ತಾಪುರ ಕಲಬುರಗಿ

info.reporterkarnataka@gmail.com

ಚಿತ್ತಾಪುರ ಗ್ರಾಮದಲ್ಲಿ ಒಟ್ಟು 12 ಜನ ಚುನಾಯಿತ ಪ್ರತಿನಿಧಿಗಳಿದ್ದರೂ ಮೂಲಭೂತ ಸೌಕರ್ಯಗಳು ಸಿಗದೆ ಗ್ರಾಮಸ್ಥರು ನರಕಯಾತನೆ ಅನುಭವಿಸುತ್ತಿದ್ದಾರೆ. ಗ್ರಾಮದಲ್ಲಿ ಅಭಿವೃದ್ಧಿ ಕಾಣದೆ ಇರುವುದಕ್ಕೆ ಪಂಚಾಯತಿ ಅಧ್ಯಕ್ಷರ ದಿವ್ಯ ನಿರ್ಲಕ್ಷ್ಯವೇ ಮುಖ್ಯ ಕಾರಣವಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಸುಕ್ಷೇತ್ರಗಳಲ್ಲಿ ಒಂದಾಗಿರುವ ಹಲಕರ್ಟಿ ಗ್ರಾಮದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ. ಈ ಪಂಚಾಯತಿಯ ವ್ಯಾಪ್ತಿಯಲ್ಲಿ ಒಟ್ಟು 12 ಜನ ಚುನಾಯಿತ ಪ್ರತಿನಿಧಿಗಳಿದ್ದರೂ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ,ಚರಂಡಿಗಳ ಸರಿಯಾದ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ಪ್ರತಿನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ.
ಗ್ರಾಮದ ಪ್ರತಿ ವಾರ್ಡಗಳಲ್ಲಿ ಉತ್ತಮ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು ಹೋಗುತ್ತಿದೆ. ಇದರಿಂದ ರಸ್ತೆ ಯಾವುದು ಚರಂಡಿ ಯಾವುದು ಎಂಬುದು ಗ್ರಾಮಸ್ಥರಿಗೆ ತಿಳಿಯದಾಗಿದ್ದು ಸೊಳ್ಳೆಗಳ ಕಾಟ ಹೆಚ್ಚಾಗಿ ಡೆಂಗ್ಯೂ ಮಲೇರಿಯಾ ಗಳಂತಹ ರೋಗ ಬರುವ ಎಲ್ಲಾ ಲಕ್ಷಣಗಳಿವೆ. ಗ್ರಾಮದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಅಲ್ಲದೆ ಎಲ್ಲಿ ಅಂದರಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಅಲ್ಲಲ್ಲಿ ಒಡೆದು ಹೋಗಿದ್ದು ಚರಂಡಿಯ ನೀರು ಕುಡಿಯುವ ನೀರಿನಲ್ಲಿ ಮಿಶ್ರಣಗೊಂಡು
ಕುಡಿಯಲು ಯೋಗ್ಯವಲ್ಲದ ಅಶುದ್ದ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಚರಂಡಿ ನೀರು ಮಿಶ್ರಿತ ಕಲುಷಿತ ನೀರು ಕುಡಿಯುವುದು ಗ್ರಾಮಸ್ಥರಿಗೆ ಅನಿವಾರ್ಯವಾಗಿದೆ. ಇದರ ಸಮಸ್ಯೆಗಳ ಬಗ್ಗೆ ಸದಸ್ಯರಿಗೆ, ಅಧ್ಯಕ್ಷರಿಗೆ ತಿಳಿಸಿದರೂ ಯಾವುದೆ ಕಾರ್ಯಗಳು ಮಾಡುತ್ತಿಲ್ಲ ಎಂಬುದು ಗ್ರಾಮಸ್ಥರ ಅಳಲಾಗಿದೆ.
ರಸ್ತೆಯ ತುಂಬೆಲ್ಲ ಚರಂಡಿ ನೀರು ಹರಿಯುತ್ತಿರುವುದರಿಂದ ರಸ್ತೆಯ ಮೇಲೆ ನಡೆದಾಡುವ ಸಾರ್ವಜನಿಕರ ಪೈಕಿ ಸುಮಾರು ನಾಲ್ಕೈದು ಜನ ವೃದ್ಧೆಯರು ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗಾಳಾಗಿವೆ ಎಂದು ವೃದ್ದೆಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ಗಳು ರಸ್ತೆಗಿಂತಲು ಎತ್ತರವಾಗಿ ಅವೈಜ್ಞಾನಿಕವಾಗಿ ಅಳವಡಿಸಿದರಿಂದ ಅನೇಕ ದ್ವಿಚಕ್ರ ವಾಹನ ಸವಾರರು ಸಹಿತ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ ಎನ್ನುತ್ತಾರೆ ಸವಾರರು.
*ಗ್ರಾಮ ಪಂಚಾಯಿತಿ ಅಧ್ಯಕ್ಷರ ದಿವ್ಯ ನಿರ್ಲಕ್ಷ್ಯ! ಸದಸ್ಯರ ಆರೋಪ*:
ಗ್ರಾಮದ ತುಂಬೆಲ್ಲ ಚರಂಡಿ ವ್ಯವಸ್ಥೆ,ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ ವ್ಯವಸ್ತೆ ಇಲ್ಲದೆ ಗ್ರಾಮಸ್ಥರು ಸಾಕಷ್ಟು ಸಮಸ್ಯೆಗಳು ಎದುರಿಸುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯರಾದ ನಾವುಗಳೆ ಖುದ್ದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ತಿಳಿಸಿದರು ಸಹಿತ ಅಧ್ಯಕ್ಷರು ಕಲಬುರ್ಗಿಯಲ್ಲಿ ಮನೆಮಾಡಿಕೊಂಡು ಪಂಚಾಯತಿಗೆ ಬಾರದೆ ನಾನು ಬಂದು ನೋಡುತ್ತೇನೆ, ಮಾಡಿಸುತ್ತೇನೆ ಎಂದು ಹೇಳುತ್ತಾರೆ ಹೊರತು ಇಲ್ಲಿಯವರೆ ಬಂದೇ ಇಲ್ಲ, ಹೀಗಿರುವಾಗ ಸದಸ್ಯರಾದ ನಾವುಗಳು ಅನುದಾನ ಇಲ್ಲದೆ ಗ್ರಾಮದ ಅಭಿವೃದ್ಧಿ ಮರಿಚಿಕೆ ಆಗಿದೆ, ಕಳೆದ ರಂಜಾನ್ ತಿಂಗಳಲ್ಲಿ ಕುಡಿಯುವ ನೀರು ಸರಬರಾಜು ಆಗದೆ ಇರುವುದರಿಂದ ಸದಸ್ಯರಾದ ಭಾಗ್ಯಲಕ್ಷ್ಮಿ ಕರೆಪ್ಪ ಪೂಜಾರಿ ಅವರು ತಮ್ಮ ಸ್ವಂತ ಹಣದಲ್ಲಿ ಟ್ಯಾಂಕ್ ಗಳ ಮೂಲಕ ಸುಮಾರು ಐವತ್ತಕ್ಕೂ ಬಾರಿ ನೀರು ತಂದು ನೀರಿನ ವ್ಯವಸ್ಥೆ ಮಾಡಿದ್ದಾರೆ.



ಗ್ರಾಮದ ಈ ಎಲ್ಲಾ ಸಮಸ್ಯೆಯೆಗಳಿಗೆ ಗ್ರಾಮ ಪಂಚಾಯತಿಯ ಅಧ್ಯಕ್ಷರ ದಿವ್ಯ ನಿರ್ಲಕ್ಷ್ಯವೆ ಮುಖ್ಯ ಕಾರಣ ಎನ್ನುತ್ತಾರೆ ಗ್ರಾಮ ಪಂಚಾಯತಿಯ ಸದಸ್ಯ ವೀರೇಶ ಸ್ವಾಮಿ ಗ್ರಾಮದ ಮುಖಂಡರಾದ ಭೀಮಾಶಂಕರ ಮತ್ತು ಇನ್ನಿತರ ಸದಸ್ಯರ ಆರೋಪವಾಗಿದೆ.
*ಮೂರು ಜನ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ*:
ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳ ಮದ್ಯೆ ಹೊಂದಾಣಿಕೆ ಇಲ್ಲದೆ ಇರುವುದರಿಂದ ಒಂದು ವರ್ಷದಲ್ಲಿ ಸುಮಾರು ಮೂರು ಜನ ಅಭಿವೃದ್ಧಿ ಅಧಿಕಾರಿಗಳು ನಮಗೆ ಈ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸಲು ಆಗುವುದಿಲ್ಲ ಈ ಪಂಚಾಯತಿ ನಿಮಗೆ ಬೇಡವೆ ಬೇಡ ಎಂದು ತಾಲೂಕಿನ ವಿವಿಧ ಗ್ರಾಮ ಪಚಾಯತಿಗಳಿಗೆ ವರ್ಗಾವಣೆ ಮಾಡಿಕೊಂಡು ಹೋಗಿದ್ದರಿಂದ ಈ ಪಂಚಾಯತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳೇ ಇಲ್ಲದಂತಾಗಿದೆ.
*ಸಮಸ್ಯೆಗಳ ಬಗ್ಗೆ ದೂರು ಸಲ್ಲಿದರು ಕ್ರಮ ಕೈಗೊಳ್ಳದ ಅಧಿಕಾರಿಗಳು*: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಗುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಂಚಾಯತಿ ಸದಸ್ಯರು ತಾಲೂಕ ಪಂಚಾಯತ ಅಧಿಕಾರಿಗಳಿಗೆ ತಿಳುಹಿಸಿದರು ಸಹಿತ ತಾಲೂಕ ಪಂಚಾಯತ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ,ಇಂತಹ ಅಧಿಕಾರಿಗಳ ವಿರುದ್ದ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಸದಸ್ಯರು ಮನವಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು