11:14 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಅಯೋಧ್ಯೆ ಸಮೀಪ ಅಪಘಾತದಲ್ಲಿ 7 ಮಂದಿ ಬೀದರ್ ಪ್ರವಾಸಿಗರ ಸಾವು: ಸಂತ್ರಸ್ತರಿಗೆ ನೆರವಾಗುವಂತೆ ಸಿಎಂ ಯೋಗಿಗೆ ಬೊಮ್ಮಾಯಿ ಮನವಿ

30/05/2022, 14:47

ಬೆಂಗಳೂರು(reporterkarnataka.com):

ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಬೀದರ್ ಜಿಲ್ಲೆಯ ಯಾತ್ರಾರ್ಥಿಗಳ ಕುಟುಂಬಕ್ಕೆ ನೆರವಾಗುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರೆ.

ಅಪಘಾತದಲ್ಲಿ ಒಂದೇ ಕುಟುಂಬದ 7 ಜನರು ಮೃತಪಟ್ಟು 9 ಜನರು ಗಾಯಗೊಂಡಿದ್ದಾರೆ.ಈ ಘಟನೆ ಕುರಿತು ತಿಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೃತರ ಕುಟುಂಬಗಳಿಗೆ ಸಂತಾಪ ತಿಳಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಇತ್ತ ಅಪಘಾತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯದ ಪ್ರವಾಸಿಗರ ಸುರಕ್ಷತೆ, ಅವರಿಗೆ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಕುರಿತಂತೆ ಈಗಾಗಲೇ ತಾವು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವ ಜೊತೆಗೆ ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು