1:30 PM Tuesday20 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ

20/10/2026, 13:30

ಬೆಂಗಳೂರು(reporterlarnataka.com): ಆಯುಧ ಪೂಜೆ ಹಾಗೂ ವಿಜಯ ದಶಮಿಯ ಪವಿತ್ರ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಲೋಕಭವನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಶಾಂತಿ, ಸಮೃದ್ಧಿ ಹಾಗೂ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.
ಲೋಕಭವನದ ತಮ್ಮ ಕಚೇರಿಯಲ್ಲಿ ಆಯುಧ ಪೂಜೆ ನೆರವೇರಿಸಿದ ರಾಜ್ಯಪಾಲರು, ಬಳಿಕ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ದುರ್ಗಾ ದೇವಿಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ದುರ್ಗಾ ದೇವಿಯ ಕೃಪೆಯಿಂದ ನಾಡಿನಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು. ಲೋಕಭವನದ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಹಬ್ಬದ ಸಂತಸವನ್ನು ಹಂಚಿಕೊಂಡ ರಾಜ್ಯಪಾಲರು, ಅವರಿಗೆ ವಿಜಯ ದಶಮಿ ಹಾಗೂ ಆಯುಧ ಪೂಜೆಯ ಶುಭಾಶಯಗಳನ್ನು ಕೋರಿದರು.
ಕರ್ತವ್ಯಕ್ಕೆ ಗೌರವವೇ ಆಯುಧ ಪೂಜೆಯ ಸಂದೇಶ
ರಾಜ್ಯದ ಜನತೆಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದ ರಾಜ್ಯಪಾಲರು, “ಆಯುಧ ಪೂಜೆ ನಮ್ಮ ಜೀವನಕ್ಕೆ ಆಧಾರವಾಗಿರುವ ಸಾಧನಗಳು ಮತ್ತು ಉಪಕರಣಗಳಿಗೆ ಗೌರವ ಸಲ್ಲಿಸುವ ವಿಶಿಷ್ಟ ಭಾರತೀಯ ಪರಂಪರೆಯಾಗಿದೆ. ನಾವು ಕೈಗೊಳ್ಳುವ ಪ್ರತಿಯೊಂದು ಕಾರ್ಯದಲ್ಲೂ ಶ್ರದ್ಧೆ, ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆಯನ್ನು ಬೆಳೆಸಿಕೊಳ್ಳುವ ಸಂಕಲ್ಪಕ್ಕೆ ಈ ದಿನ ಸ್ಫೂರ್ತಿ ನೀಡಲಿ” ಎಂದು ಹೇಳಿದರು.
“ವಿಜಯ ದಶಮಿ ಕೇವಲ ಒಂದು ಹಬ್ಬವಲ್ಲ; ಅದು ಸತ್ಯ ಮತ್ತು ಧರ್ಮದ ಮಾರ್ಗದಲ್ಲಿ ಮುನ್ನಡೆಯುವ ಸಂದೇಶವನ್ನು ನೀಡುವ ಪವಿತ್ರ ಸಂದರ್ಭ. ನಮ್ಮ ಜೀವನದಲ್ಲಿನ ನಕಾರಾತ್ಮಕ ಆಲೋಚನೆಗಳನ್ನು ದೂರ ಮಾಡಿ, ಸತ್ಯ, ಶಾಂತಿ, ಸದಾಚಾರ ಹಾಗೂ ಪರಸ್ಪರ ಗೌರವದ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ,” ಎಂದು ಅವರು ಕರೆ ನೀಡಿದರು.
ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿ ಮತ್ತು ಪರಂಪರೆಗಳು ಸಮಾಜದಲ್ಲಿ ಏಕತೆ ಹಾಗೂ ಸೌಹಾರ್ದತೆಯನ್ನು ಬಲಪಡಿಸಲಿ ಎಂದು ಆಶಿಸಿದ ರಾಜ್ಯಪಾಲರು, ನಾಡಿನ ಪ್ರಗತಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಸಮೃದ್ಧ ಮತ್ತು ಶಾಂತಿಯುತ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಹೇಳಿದರು.
“ಈ ವಿಜಯ ದಶಮಿ ಪ್ರತಿಯೊಂದು ಮನೆಗೂ ಸಂತೋಷ, ಆರೋಗ್ಯ ಮತ್ತು ನೆಮ್ಮದಿಯನ್ನು ತರಲಿ. ಹೊಸ ಆಶಯಗಳು ಹಾಗೂ ಹೊಸ ಭರವಸೆಗಳೊಂದಿಗೆ ಎಲ್ಲರೂ ಮುನ್ನಡೆಯುವಂತಾಗಲಿ,” ಎಂದು ರಾಜ್ಯಪಾಲರು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು