8:41 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಅಝದಿ ಕಿ ಅಮೃತ ಮಹೋತ್ಸವ: ಮಂಗಳೂರು ವಿವಿ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ

10/08/2022, 21:56

ಮಂಗಳೂರು(reporterkarnataka.com): ವಿಶ್ವ ವಿದ್ಯಾನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಸಂಘ,ವಿಭಾಗದ ವತಿಯಿಂದ ಅಝದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕೀರಣ ರವೀಂದ್ರ ಕಲಾಭವನದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಗೋವಾ ವಿಶ್ವ ವಿದ್ಯಾ ನಿಲಯದ ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಶಾಮ್ ಭಟ್ ಅವರು ಮಾತನಾಡಿ, ಕರಾವಳಿಯ ಸ್ಥಳೀಯ  ಹೋರಾಟಗಾರರು ಸ್ವಾತಂತ್ರ್ಯದ ಜೊತೆಗೆ ಅಸ್ಪ್ರಶ್ಯತೆಯ ನಿವಾರಣೆಗೆ ನೀಡಿದಂತಹ ಕೊಡುಗೆ, ಉಪ್ಪಿನ ಸತ್ಯಾಗ್ರಹದಲ್ಲಿ ಸ್ಥಳೀಯರು ತೊಡಗಿಸಿಕೊಂಡ  ರೀತಿ ವಿಶೇಷವಾದದ್ದು. ತಮ್ಮ ಪ್ರೀತಿಯ ಚಿನ್ನಾಭರಣಗಳನ್ನು ನೀಡಿ ಸ್ವಾತಂತ್ರ್ಯದ ಚಳುವಳಿಗೆ ಸಹಕಾರ ನೀಡಿದ ಮಹಿಳೆಯರ ತ್ಯಾಗ ಅತ್ಯಮೂಲ್ಯವಾದದು. ಅದರಂತೆ ನಾವು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಅವರು ಕರೆ ನೀಡಿದರು.



ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರೊ.ಕೆ.ಎಂ ಲೋಕೇಶ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ನಡೆದ ಬಲಿದಾನದ ಜತೆಗೆ ಸ್ವಾತಂತ್ರ್ಯ ನಂತರ ದಿನಗಳಲ್ಲಿ ನಡೆದ ವಿದ್ಯಮಾನಗಳಿಂದ  ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಉಳಿಸಿಕೊಟ್ಟ ಯೋಧರ ಬಲಿದಾನವನ್ನು ಗೌರವಿಸಬೇಕಾಗಿದೆ ಎಂದರು.

ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.
.ಪಿ. ಸುಬ್ರಮಣ್ಯ ಯಡಪಡಿತ್ತಾಯ ವಹಿಸಿದ್ದರು.
ಅವರು ಮಾತನಾಡಿ, ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ನಾವು ನೆನಪಿಸಿಕೊಳ್ಳಬೇಕು.
ಸ್ವಾತಂತ್ರ್ಯ ಸಿಕ್ಕಿದೆ ಎಂದು ಉದಾಸೀನತೆ ತೋರದೆ ಅದನ್ನು ಕಾಪಾಡುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ನಾವು ಅಸಡ್ಡೆ ತೋರಿದರೆ ಇನ್ನು ಮುಂದಿನ 25 ವರ್ಷಗಳಲ್ಲಿ ಕಷ್ಟದ ಸಂದರ್ಭಗಳನ್ನು ನಾವು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಪ್ರಧಾನಿ ಮೋದಿಜಿ ಅವರ ಹರ್ಗರ್ ತಿರಂಗ ಎನ್ನುವ ನಿಟ್ಟಿನಲ್ಲಿ ಮನೆ ಮನೆಯಲ್ಲಿ ಸ್ವಾತಂತ್ರ್ಯದ ಹೋರಾಟಗಾರರನ್ನು ನೆನೆಸಿಕೊಳ್ಳುವ ಉದ್ದೇಶದಿಂದ, ದೇಶಪ್ರೇಮವನ್ನು ಸಾರುವ  ಸಂಕೇತವಾಗಿ ತಿರಂಗ ಆರಿಸಿ ಎಂದು ಕರೆ ನೀಡಿದರು.


ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ, ಕಾರ್ಯಾಗಾರದ ಸಂಯೋಜಕ ಡಾ.ಜಯರಾಜ್ ಎನ್., ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್, ಹಿಂದಿ ವಿಭಾಗದ ಮುಖ್ಯಸ್ಥೆ ಸುಮನ ಟಿ. ರೋಡನ್ನವರ್, ಸೋಶಿಯಾಲಜಿ ವಿಭಾಗದ ಮುಖ್ಯಸ್ಥೆ ಗಾಯತ್ರಿ ಎನ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು