10:07 PM Sunday22 - March 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಭೀಕರ ರಸ್ತೆ ಅಪಘಾತಕ್ಕೆ 3 ಮಂದಿ ಸಾವು; ನಾಲ್ವರಿಗೆ ತೀವ್ರ ಗಾಯ; ಉಡುಪಿ ಶ್ರೀಕೃಷ್ಣ ಮಠಕ್ಕೆ ಹೊರಟ ಯಾತ್ರಾರ್ಥಿಗಳು

15/11/2025, 11:11

ಮಂಗಳೂರು(reporterkarnataka.com): ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಸರ್ಕಲ್ ನಲ್ಲಿ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇತರ 4 ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟವರನ್ನು‌ ಕಾರಿನಲ್ಲಿದ್ದ ರಮ್ಯ(23), ರವಿ‌(64) ಹಾಗೂ ನಂಜಮ್ಮ(75) ಎಂದು ಗುರುತಿಸಲಾಗಿದೆ. ಇವರೆಲ್ಲ ಬೆಂಗಳೂರು ನಿವಾಸಿಗಳಾಗಿದ್ದಾರೆ.
ಬಿ.ಸಿ. ರೋಡಿನ ಸರ್ಕಲ್ ಗೆ ಇನ್ನೋವಾ ಕಾರು ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡು ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರಿನ ಪೀಣ್ಯದ ನಿವಾಸಿಗಳು ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಎಂಬ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿ.ಸಿ. ರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ‌ ಸರ್ಕಲ್ ಅವೈಜ್ಞಾನಿಕವಾಗಿರುವುದರಿಂದಲೇ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು