2:36 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

B C Road | ಕೈಕಂಬದಲ್ಲಿ ಬಂಟ್ವಾಳ ವ್ಯವಸಾಯ ಸಂಘದ ‘ಅಕ್ಷಯ ಸೌಧ’ ಲೋಕಾರ್ಪಣೆ

09/06/2025, 23:51

ಬಂಟ್ವಾಳ(reporterkarnataka.com): ಸಹಕಾರಿ ಸಂಘವು ಜನಸಾಮಾನ್ಯರ ಜೊತೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು. ಪ್ರತಿಯೊಬ್ಬರ ಸಹಕಾರ ಇಲ್ಲದೆ ಸಂಘ ಲಾಭದಾಯಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಬಂಟ್ವಾಳ ವ್ಯವಸಾಯ ಸಹಕಾರಿ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆಯಾಗುತ್ತಿರುವುದು ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಬಿ.ಸಿ.ರೊಡಿನ ಕೈಕಂಬದಲ್ಲಿ ಬಂಟ್ವಾಳ ವ್ಯವಸಾಯ ಸಹಕಾರಿ ಸಂಘದ ನೂತನ ಕಟ್ಟಡ ಅಕ್ಷಯ ಸೌಧದ ಉದ್ಘಾಟನಾ ಸಮಾರಂಭದಲ್ಲಿ ದೀಪಪ್ರಜ್ವಲನೆ ಮಾಡಿ ಮಾತನಾಡಿದರು.
ಕರ್ನಾಟಕ ರಾಜ್ಯಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಸಹಕಾರ ರತ್ನ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು, ಅಕ್ಷಯ ಸೌಧ ಜನರಿಗೆ ಅಕ್ಷಯವಾಗಲಿ ಕೃಷಿ ಸಾಲ ಶೂನ್ಯ ಬಡ್ಡಿಯಲ್ಲಿ ಸಿಗುವಂತಾಗಬೇಕು. ಸಹಕಾರಿ ಸಂಘಗಳು ರೈತರ ಸಂಸ್ಥೆಯಾಗಿದ್ದು ಲಾಭದಾಯಕವಾಗಿ ಕಾರ್ಯನಿರ್ವಹಿಸಿ ರೈತರಿಗಾಗಿ ನಿರಂತರ ಸೇವೆಯನ್ನು ಮಾಡಬೇಕು ಎಂದರು.

ಮಾಜಿ ಸಚಿವ ನಾಗರಾಜ ಶೆಟ್ಟಿ ಜಿ.ಆನಂದ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿ ರೈತರಿಗೆ ಮತ್ತು ಬಡವರಿಗೆ ಸಹಕಾರ ನೀಡುವುದರ ಜೊತೆಗೆ ಮಹಿಳೆಯರಿಗೂ ಉತ್ತಮ ಸೇವೆ ಸಹಕಾರಿ ಸಂಘದಿಂದ ಸಿಗುವಂತಾಗಲಿ ಎಂದು ಶುಭಹಾರೈಸಿದರು.
ಗಣಕೀಕರಣವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಪುರಸಭೆ ಅಧ್ಯಕ್ಷ ಟಿ.ವಾಸು ಪೂಜಾರಿ, ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಭೂಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿಸೋಜ, ಬಂಟ್ವಾಳ ಪುರಸಭೆ ಸದಸ್ಯ ಎ.ಗೋವಿಂದ ಪ್ರಭು, ಸದಸ್ಯೆ ಜಯಂತಿ ವಿ. ಬಂಗೇರ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಎಮ್. ಕರುಣೇಂದ್ರ ಪೂಜಾರಿ ಕೊಂಬರಬೈಲು ಮಾತನಾಡಿ ಎಲ್ಲಾ ನಿರ್ದೇಶಕರ ಹಾಗೂ ಸದಸ್ಯರ ಸಹಕಾರದಿಂದ ಉತ್ತಮವಾದ ಅಕ್ಷಯ ಸೌಧ ಕಟ್ಟಡ ನಿರ್ಮಾಣವಾಗಿದೆ ಎಂದು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಆದಿರಾಜ ಕೆ. ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಕಾಮತ್ ವರದಿ ಮಂಡಿಸಿದರು.
*ಸನ್ಮಾನ:* ಸಹಕಾರ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ , ಸಂಘದ ಮಾಜಿ ಅಧ್ಯಕ್ಷ ದಿ. ಜಿ ಆನಂದ ರವರ ಪತ್ನಿ ಶಾರದಾ ಜಿ.ಆನಂದ , ಮಾಜಿ ಅಧ್ಯಕ್ಷ ಪದ್ಮನಾಭ ದೇವಾಡಿಗ , ಸಹಕಾರ ರತ್ನ ರವೀಂದ್ರ ಕಂಬಳಿ, ಇಂಜಿನಿಯರ್ ಸುಧಾಕರ ಕೆ.ಟಿ., ಗುತ್ತಿಗೆದಾರರಾದ ಹರೀಶ್, ನವೀನ್ ರವರನ್ನು ಸನ್ಮಾನಿಸಲಾಯಿತು.
ನಿರ್ದೇಶಕರಾದ ವಿಠಲ ಪೂಜಾರಿ , ಎ.ಲಕ್ಷ್ಮೀ ವಿ. ಪ್ರಭು , ಹರೀಶ್, ಬಿ. ಜಯ ಕುಂದರ್ ,ಮುರಳೀಧರ ಭಟ್ , ಚಂದ್ರಶೇಖರ ಭಂಡಾರಿ, ದಿವಾಕರ ಶೆಟ್ಟಿ , ಪದ್ಮನಾಭ ಗೌಡ , ಗಣೇಶ , ಜಯಂತಿ, ಬಂಟ್ವಾಳ ವಲಯ ಮೇಲ್ವಿಚಾರಕ ಕೀರ್ತಿ ರಾಜ್ ಹಾಗೂ ಶಾಖೆಯ ಸಿಬ್ಬಂದಿಗಳು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು