3:03 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಹೆರಿಗೆ ವೇಳೆ ತಾಯಿ-ಮಗು ಸಾವು; ಪ್ರತಿಭಟನಾಕಾರರ ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ

12/12/2021, 23:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದು, ತಾಯಿ ಹೊಟ್ಟೆಯಲ್ಲೇ ಹಸುಗೂಸು ಕೂಡ ಸಾವನ್ನಪ್ಪಿದ ದಾರುಣ ಘಟನೆಯನ್ನು ವಿರೋಧಿಸಿ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಎದುರು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.


ವೈದ್ಯರ ನಿರ್ಲಕ್ಷ್ಯ ದಿಂದ ಬಾಳೆಹೊನ್ನೂರು ನಿವಾಸಿ ಶ್ವೇತಾ (27) ಎಂಬ ಗರ್ಭಿಣಿ ಯುವತಿ ಮೃತಪಟ್ಟಿದ್ದರು. ಇದನ್ನು ವಿರೋಧಿಸಿ ಮೃತರ ಸಂಬಂಧಿಕರು ಹಾಗೂ ಸ್ಥಳೀಯರು ವೈದ್ಯರನ್ನು ಬಂಧಿಸುವಂತೆ ಆಗ್ರಹಿಸಿ ಪ್ರಾಥಮಿಕ ಆರೋಗ್ಯ ಕೇಂದ್ರ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಒಂದು ಹಂತದಲ್ಲಿ ಪೊಲೀಸ್ ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆದು ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.

ವೈದ್ಯ ಎಲ್ಡೋಸ್ ಅವರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಇವರು ಎನ್.ಆರ್.ಪುರ, ಶೃಂಗೇರಿಯಲ್ಲಿ ಅಮಾನತ್ತಾಗಿದ್ದ ವೈದ್ಯರು ಎನ್ನಲಾಗಿದೆ.

ಪೋಷಕರು ಗರ್ಭಿಣಿಯನ್ನ ಚಿಕ್ಕಮಗಳೂರಿಗೆ ಕರೆದೊಯ್ಯಲು ಮುಂದಾಗಿದ್ದರು. ಅಷ್ಟರಲ್ಲಿ ವೈದ್ಯರು ನಾನೇ ಹೆರಿಗೆ ಮಾಡಿಸುತ್ತೇನೆಂದು ತಡೆದರು. ಇದೀಗ ವೈದ್ಯರ ನಿರ್ಲಕ್ಷ್ಯದಿಂದ ತಾಯಿ-ಮಗು ಸಾವು ಸಂಭವಿಸಿದೆ ಎಂದು ಸಂಬಂಧಿಕರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು