4:19 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಬಾಳೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವಪತ್ತೆ; ಅತ್ಯಾಚಾರವೆಸಗಿ ಕೊಲೆ ಶಂಕೆ; ಗ್ರಾಮಸ್ಥರ ತೀವ್ರ ಆಕ್ರೋಶ

25/08/2024, 14:09

*ದಲಿತ ಸಂಘಟನೆಗಳಿಂದ ಕವಲಂದೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಾಳೆ ತೋಟವೊಂದರಲ್ಲಿ ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ದಲಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.
ಗಟ್ಟವಾಡಿ ಗ್ರಾಮದ ಎಸ್.ಶಶಿಕಲಾ (38)ಮೃತ ಮಹಿಳೆಯಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮದ ನಾಗರಾಜು ಎಂಬಾತನನ್ನು ಶಶಿಕಲಾ ವಿವಾಹವಾಗಿದ್ದರು. ಕೋವಿಡ್ ಸಂದರ್ಭದಲ್ಲಿ ನಾಗರಾಜು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅಂದಿನಿಂದ ಶಶಿಕಲಾ ತವರು ಮನೆಯಾದ ಗಟ್ಟವಾಡಿ ಗ್ರಾಮದಲ್ಲಿಯೇ ವಾಸವಾಗಿದ್ದರು.
ನಂಜನಗೂಡಿನ ಕೈಗಾರಿಕಾ ಪ್ರದೇಶದಲ್ಲಿರುವ ಲೂನರ್ಸ್ ಕಾರ್ಖಾನೆಯಲ್ಲಿ ಶಶಿಕಲಾ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆ.23 ರಂದು ಕೆಲಸಕ್ಕೆ ತೆರಳಿದ ಶಶಿಕಲಾ ಮನೆಗೆ ಹಿಂದಿರುಗಿಲ್ಲ.
ರಾತ್ರಿ ಸಮಯದಲ್ಲಿ ಮೃತ ಮಹಿಳೆಯ ಅಣ್ಣನಿಗೆ ಗಟ್ಟವಾಡಿ ಗ್ರಾಮದ ನಂಜುಂಡಪ್ಪ ಉರುಫ್ ಸಿದ್ದಲಿಂಗಪ್ಪ ದೂರವಾಣಿ ಮೂಲಕ ಕರೆ ಮಾಡಿ, ನಮ್ಮ ಬಾಳೆ ತೋಟದಲ್ಲಿ ನಿನ್ನ ತಂಗಿ ನೇಣು ಹಾಕಿಕೊಂಡಿದ್ದಾಳೆ ಎಂದು ತಿಳಿಸಿ ಆರೋಪಿ ನಂಜುಂಡಪ್ಪ ಉರುಫ್ ಸಿದ್ದಲಿಂಗಪ್ಪ ಪರಾರಿಯಾಗಿದ್ದಾನೆ.


ಸ್ಥಳದಲ್ಲಿ ಕಬ್ಬಿಣದ ರಾಡು, ಹಾಸಿಗೆ, ಚಾಪೆ, ದಿಂಬು, ಮೊಬೈಲ್ ಗಳು ಪೊಲೀಸರಿಗೆ ದೊರೆತಿವೆ. ನನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ ಎಂದು ಸಹೋದರ ಮಹದೇವಯ್ಯ ಆರೋಪಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆರೋಪಿಸಿ ಕವಲಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣವನ್ನು ದಾಖಲು ಮಾಡಿಕೊಳ್ಳಲು ಮೀನಮೇಷ ಎಣಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಅತ್ಯಾಚಾರವೆಸಗಿ ಕೊಲೆ ಮಾಡಿರುವ ಬಗ್ಗೆ ಆರೋಪಿಸಲಾದ ನಂಜುಂಡಪ್ಪನನ್ನು ಈ ಕೂಡಲೇ ಬಂಧಿಸಬೇಕು.
ರಾತ್ರಿಯ ಸಮಯದಲ್ಲಿ ಕೊಲೆಯ ಬಗ್ಗೆ ತಿಳಿಸಲು ಬಂದ ಗ್ರಾಮದ ಯುವಕರಿಗೆ ಪೊಲೀಸ್ ಸಿಬ್ಬಂದಿಯಾದ ವಿಜಯಕುಮಾರ್ ಬೆದರಿಸಿ ನಿರ್ಲಕ್ಷ್ಯ ವಹಿಸಿರುವ ಪೊಲೀಸ್ ಸಿಬ್ಬಂದಿಯನ್ನು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್ಐಗಳಾದ ಕೃಷ್ಣಕಾಂತಕೋಳಿ, ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು