10:22 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ ನಿಧನ: ಕೆಎಫ್ ಎಂಎ ಸಂಸ್ಥೆ ತೀವ್ರ ಸಂತಾಪ

02/01/2025, 23:11

ಬೆಂಗಳೂರು(reporterkarnataka.com): ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬಾಲಿ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಮೃದಂಗ ಕಲಿಕೆ ಆರಂಭಿಸಿದ್ದ ಬಾಲಿ ಅವರು ಡೋಲಕ್, ಮೃದಗಂ, ತಬಲಾ ವಾದ್ಯಗಳನ್ನು ನುಡಿಸುವಲ್ಲೂ ಪರಿಣಿತರಾಗಿದ್ದರು. ಡ್ರಮ್ಸ್, ಬ್ಯಾಂಗೋ, ಕಾಂಗೋಸ್ ಗಳಲ್ಲಿ ಕೂಡ ಅವರಿಗೆ ಅಸಾಧಾರಣ ಪರಿಣಿತಿ ಇತ್ತು. ಸುಗಮ ಸಂಗೀತದ ಹಿರಿಯ ಕಲಾವಿದರಾದ ಬಾಳಪ್ಪ ಹುಕ್ಕೇರಿ, ಪಿ.ಕಾಳಿಂಗ ರಾವ್, ಮೈಸೂರು ಅನಂತ ಸ್ವಾಮಿ, ಸಿ.ಅಶ್ವತ್ಥ್ ಮೊದಲಾದವರ ಸಂಯೋಜನೆಯ ವಾದ್ಯಗೋಷ್ಟಿಗಳನ್ನು ಅವರು ನಿರ್ವಹಿಸಿದ್ದರು. ಕನ್ನಡದ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ‘ನಿತ್ಯೋತ್ಸವ’ದಿಂದಲೂ ಅವರು ಸಕ್ರಿಯರಾಗಿದ್ದರು. ಜಿ.ಕೆ.ವೆಂಕಟೇಶ್, ವಿಜಯಭಾಸ್ಕರ್, ಎಂ.ರಂಗರಾವ್, ಡಾ.ರಾಜೀವ ತಾರಾನಾಥ್, ಅಶ್ವತ್ಥ್-ವೈದಿಯವರು ಸಂಯೋಜಿಸಿದ್ದ ಚಿತ್ರಗೀತೆಗಳಿಗೆ ಬಾಲಿ ಅವರು ಕೆಲಸ ಮಾಡಿದ್ದರು. ಶಂಕರ್ ನಾಗ್ ಅವರ ಸಂಕೇತ್ ಸ್ಟುಡಿಯೋ ನಿರ್ಮಾಣದಲ್ಲೂ ಬಾಲಿ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು. ಹಿನ್ನೆಲೆ ಸಂಗೀತದ ಬಗ್ಗೆ ಅಡಿಯೋ-ವಿಡಿಯೋ-ಓದುವ ಹೀಗೆ ಮೂರು ಅಯಾಮದ ಪುಸ್ತಕವನ್ನು ಬರೆದಿದ್ದ ಬಾಲಿ ಅವರು ತಮ್ಮ ‘ರಮ್ಯ ಕಲ್ಚರಲ್ ಅಕಾಡಮಿ’ಯ ಮೂಲಕ ನೂರಾರು ಹೊಸ ಕಲಾವಿದರನ್ನು ರೂಪಿಸಿದ್ದರು. ಜೀ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಸರಿಗಮಪ’ದ ತೀರ್ಪುಗಾರರ ಮಂಡಳಿಯಲ್ಲೂ ಬಾಲಿ ಅವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು