10:04 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಬಿ.ಬಿ. ಮಂಜುನಾಥ್, ಉಪಾಧ್ಯಕ್ಷೆಯಾಗಿ ಗೀತಾ ಆಯ್ಕೆ

28/07/2023, 18:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿ.ಬಿ.ಮಂಜುನಾಥ್ ಅವಿರೋಧವಾಗಿ ಅಯ್ಕೆಯಾಗಿದ್ದಾರೆ.

ಉಪಾಧ್ಯಕ್ಷೆಯಾಗಿ ಕೆ.ಆರ್.ಗೀತಾ ಆಯ್ಕೆಯಾಗಿದ್ದಾರೆ. ಕೆಡಿಪಿ ಸದಸ್ಯ ಬಿ.ಎಂ.ಭರತ್ ಮಾತನಾಡಿ ‘ ಗ್ರಾಮದ ಏಳಿಗೆಗಾಗಿ ಜನರಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರು ಕೈಜೋಡಿಸಿದರೆ ಗ್ರಾಮಾಭಿವೃದ್ದಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ವ ಗ್ರಾಮಸ್ಥರು ಸಹಕಾರ ನೀಡಬೇಕು’ ಎಂದರು.
ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ’ ಪಕ್ಷತೀತಾ ನೆಲೆಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಹಂತಹಂತವಾಗಿ ಕೈಗೊಂಡು ಗ್ರಾಮಾಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಅವರಿಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಹಾಗೂ ಅಭಿಮಾನಿಗಳು ಅಭಿನಂದಿಸಿದರು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಯಾಗಿ ಆರ್.ಹೇಮಂತ್ ರಾಜ್, ಪ್ರಭಾರಿ ಪಿಡಿಒ ಯತೀಶ್ ಕುಮಾರ್, ಬಿಜೆಪಿ ಹೋಬಳಿ ಘಟಕ ಅಧ್ಯಕ್ಷ ಎಂ.ಎಲ್.ವಿಜೇಂದ್ರ, ಶರಣ್, ಸದಸ್ಯರಾದ ಮನೋಜ್,ಪ್ರಕಾಶ್,ಶ್ವೇತಾ, ಜಯಶ್ರೀರಮೇಶ್, .ತಾ.ಪಂ.ಮಾಜಿ ಅಧ್ಯಕ್ಷೆ ಪ್ರಮೀಳ ಮಂಜಯ್ಯ, ಸುಂಕಸಾಲೆ ಗ್ರಾ.ಪಂ.ಮಾಜಿ ಅಧ್ಯಕ್ಷ ಡಿ.ವೈ. ಮಹೇಶ್, ಶಶಿಧರ್ ಜಾವಳಿ,ರಘುಪತಿ,ಬಿ.ಎಸ್.ಕಲ್ಲೇಶ್,ಟಿ.ಎಂ.ಗಜೇಂದ್ರ, ಶಾಮಣ್ಣ ಬಣಕಲ್,ಜಗದೀಶ್, ಸತೀಶ್ ಬಾಳೂರು,ಸಂಜಯ್ ಗೌಡ, ಜೈಪಾಲ್ ಬಿದರಹಳ್ಳಿ, ಮನೋಜ್,ಅಭಿಲಾಷ್,ಚಂದನ್ ಕಾಮತ್,ಪರೀಕ್ಷಿತ್ ಜಾವಳಿ, ವೇಣುಗೋಪಾಲ್ ಪೈ,ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು