ಇತ್ತೀಚಿನ ಸುದ್ದಿ
ಭಾರಿ ಮಳೆ: ಜಿಲ್ಲಾಧಿಕಾರಿ ಮಂಗಳೂರು ನಗರ ಪ್ರದಕ್ಷಿಣೆ; ಪರಿಸ್ಥಿತಿ ಪರಿಶೀಲನೆ
05/07/2023, 18:30
ಮಂಗಳೂರು(reporter Karnataka.com): ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ನಗರ ಪ್ರದಕ್ಷಿಣೆ ಮಾಡಿ ಪರಿಶೀಲನೆ ನಡೆಸಿದರು.
ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಉದ್ಬವಿಸಿದ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಇದ್ದರು.