ಇತ್ತೀಚಿನ ಸುದ್ದಿ
ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ; ತಾಸಿಗೂ ಅಧಿಕ ಕಾಲ ಟ್ರಾಫಿಕ್ ಜಾಮ್
02/02/2025, 13:58
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ
ಭಾರೀ ಗಾಳಿಗೆ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಪರಿಣಾಮ ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.
ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂದಿಗಳಿಂದ ತೆರವು ಕಾರ್ಯಚರಣೆಯಲ್ಲಿ ಪಾಲ್ಗೊಂಡರು. ರಸ್ತೆ ಬಂದ್ ಆಗಿದ್ರಿಂದ ವಾಹನ ಸವಾರರು ಪರದಾಡುವಂತಾಯಿತು.