8:42 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಾಬಾ ರಾಮ್ ದೇವ್ ವಿರುದ್ಧ ಐಎಂಎ ಮತ್ತೆ ಗರಂ: ದೇಶದ್ರೋಹ ಪ್ರಕರಣ ದಾಖಲಿಸಲು ಪ್ರಧಾನಿಗೆ ಒತ್ತಾಯ

27/05/2021, 07:43

ನವದೆಹಲಿ(reporterkarnataka news): ಕೊರೊನಾ ಲಸಿಕೆ ಹಾಗೂ ಅಲೋಪತಿ ವೈದ್ಯ ಪದ್ಧತಿ ಕುರಿತು ಟೀಕೆ ಮಾಡಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಫುಲ್ ಗರಂ ಆಗಿದೆ. ಪತಂಜಲಿ ಮುಖ್ಯಸ್ಥರಾದ ರಾಮ್ ದೇವ್ ಅವರು ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಐಎಂಎ ಪ್ರಧಾನಿ 

ನರೇಂದ್ರ ಮೋದಿ ಅವರಿಗೆ ಐಎಂಎ ಪತ್ರ ಬರೆದಿದೆ.

ಅಲೋಪಥಿ ಔಷಧಗಳನ್ನು ಪಡೆಯುತ್ತಿರುವ ಲಕ್ಷಾಂತರ ಜನರು ಮೃತಪಡುತ್ತಿದ್ದಾರೆ. ಕೋವಿಡ್ ಲಸಿಕೆ ಪಡೆದ 10,000 ವೈದ್ಯರು ಸಾವನ್ನಪ್ಪಿದ್ದಾರೆ ಎಂದು  ಬಾಬಾ ರಾಮ್ ದೇವ್ ಹೇಳಿಕೆ ನೀಡಿದ್ದರು. ಅಲೋಪಥಿ ವೈದ್ಯಕೀಯ ಪದ್ಧತಿ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ಕ್ಷಮೆಯಾಚಿಸಬೇಕು ಹಾಗೂ 1,000 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಪಾವತಿಸಬೇಕು ಎಂದು ಐಎಂಎ ಉತ್ತರಾಖಂಡ ಘಟಕ ನೋಟಇಸ್ ನೀಡಿತ್ತು.

ಇದರ ಬೆನ್ನಲ್ಲೇ ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಐಎಂಎ, ಕೋವಿಡ್ ಲಸಿಕೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ವಿರುದ್ಧ ಕೇಸ್ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು