5:58 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ: ಚಿತ್ರಾಪುರ ದೇಗುಲದ ಕಾಮಗಾರಿ ವೀಕ್ಷಣೆ

03/02/2023, 18:58

ಸುರತ್ಕಲ್(reporterkarnataka.com):
ಸುಮಾರು 20 ಲಕ್ಷ ರೂಪಾಯಿ ಅನುದಾನದಲ್ಲಿ ಬೈಕಂಪಾಡಿ ಮೊಗವೀರ ಮಹಾಸಭಾ (ರಿ) ಬೈಕಂಪಾಡಿ ಇದರ ಆಡಳಿತಕ್ಕೆ ಒಳಪಟ್ಟ ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಅಳವಡಿಕೆ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾಮಗಾರಿಗಳನ್ನು ಶಾಸಕರು ವೀಕ್ಷಿಸಿ ಪ್ರಮುಖರೊಂದಿಗೆ ಸಮಾಲೋಚಿಸಿದರು.


ದೇವಳದಲ್ಲಿ ಚಿತ್ರಾಪುರ ಮಠಾಧೀಶರಾದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸ್ಥಳೀಯ ಕಾರ್ಪೊರೇಟರ್ ಸುಮಿತ್ರಾ, ಸುನಿತಾ, ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮುಖಂಡರಾದ ಅರವಿಂದ್ ಬೆಂಗ್ರೆ, ಬೂತ್ ಅಧ್ಯಕ್ಷರಾದ ಸುನಿತ್ ಚಿತ್ರಾಪುರ, ಶಕ್ತಿಕೇಂದ್ರ ಪ್ರಮುಖರಾದ ಗಿರೀಶ್ ಬೈಕಂಪಾಡಿ, ಬೈಕಂಪಾಡಿ ಮೋಗವೀರ ಮಹಾಸಭಾ ಅಧ್ಯಕ್ಷರಾದ ವಸಂತ ಬೈಕಂಪಾಡಿ, ಗುರಿಕಾರರು, ಪೂಜಾರಿಗಳು, ಆಡಳಿತ ಸಮಿತಿ ಸದಸ್ಯರು, ಅಂಗಸಂಸ್ಥೆಗಳು,ಪಕ್ಷದ ಮುಖಂಡರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು