11:35 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಡ ಮಹಿಳೆ ಸರಕಾರದ ಯಾವುದೇ ಸೌಲಭ್ಯ ದೊರಕಿಲ್ಲ ಎಂದು ಅಪಪ್ರಚಾರ: ಸತ್ಯಾಸತ್ಯತೆ ತಿಳಿಯಲು ಕುವೆ ಗ್ರಾಪಂ ಮುಖ್ಯಸ್ಥರ ಭೇಟಿ

12/05/2022, 23:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ತಲಗೂರು ಗ್ರಾಮದಲ್ಲಿ ಬಡ ಮಹಿಳೆಗೆ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರದಿಂದ ಯಾವುದೇ ಸರ್ಕಾರಿ ಸೌಲಭ್ಯ ಹಾಗೂ ನಿವೇಶನ ಒದಗಿಸಿ ಕೊಟ್ಟಿಲ್ಲವೆಂದು ಜಾಲತಾಣಗಳಲ್ಲಿ ಮರ್ಕಲ್ ಗ್ರಾಮದ ವ್ಯಕ್ತಿಯೊಬ್ಬರು ಅಪಪ್ರಚಾರ ಮಾಡಲಾಗಿತ್ತು  ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಯವರು ಸತ್ಯಾಸತ್ಯತೆಯನ್ನು ತಿಳಿಯಲು ಆ  ಕುಟುಂಬದ ಮನೆಗೆ ಭೇಟಿ ನೀಡಿದಾಗ ಸತ್ಯಾಂಶ ಹೊರಬಂದಿದೆ. 

ಗ್ರಾಮ ಪಂಚಾಯಿತಿಯಿಂದ ಈಗಾಗಲೇ ಅವರಿಗೆ ಮನೆ ಕಟ್ಟಲು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಕೂಡ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಮಾಡಿಕೊಟ್ಟಿದ್ದಾರೆ.

ಆದರೂ ಕೂಡ ಪ್ರಚಾರದ ಗೀಳಿಗಾಗಿ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿದೆ ಎನ್ನುವ ಆರೋಪ ಕೇಳಿ 
ಬಂದಿದೆ.ಗ್ರಾಮ ಪಂಚಾಯಿತಿಯಿಂದ ಅನುದಾನ ಮನೆ ಕಟ್ಟಲು ಬಿಡುಗಡೆಯಾಗಿದ್ದು ಈಗಿರುವ ಮನೆಯ ಮುಂಭಾಗದಲ್ಲಿ ಫೌಂಡೇಶನ್ ಕೂಡ ಹಾಕಲಾಗಿದೆ. ಗ್ರಾಮ ಪಂಚಾಯಿತಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಅಪಪ್ರಚಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕುವೆ ಗ್ರಾಮಪಂಚಾಯತಿ ವ್ಯಾಪ್ತಿಯ ಮುಖಂಡರು ಮಂಗಳವಾರ ಸಂಜೆ ರತ್ನಮ್ಮ ರವರ ಮನೆಗೆ ಭೇಟಿ ನೀಡಿ ಮನೆಯನ್ನು ಬೇಗ ಪೂರ್ಣಗೊಳಿಸಲು ತಿಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು