ಇತ್ತೀಚಿನ ಸುದ್ದಿ
ಬಾದಾಮಿ: ಕೊರೊನಾಪೀಡಿತ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ; ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ
22/05/2021, 13:54
ಬಾಗಲಕೋಟೆ(reporterkarnataka news): ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಒಬ್ಬರಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ.
ತಾಲೂಕಿನ ಮುಷ್ಟಿಗೇರಿ ಗ್ರಾಮದ 42ರ ಹರೆಯದ ವ್ಯಕ್ತಿಯಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ಇವರು ಕೊರೊನದಿಂದ ಬಾಗಲಕೋಟ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ( ಮೇ 21 ರಂದು ) ಇದು ಖಚಿತಪಟ್ಟಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ.ಪಾಟೀಲ ತಿಳಿಸಿದ್ದಾರೆ.