ಇತ್ತೀಚಿನ ಸುದ್ದಿ
ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ
22/05/2021, 17:11
ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ
info.reporterkarnataka@gmail.com
ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದ್ದು, ಈ ಅಭಿಯಾನದ ಅಡಿಯಲ್ಲಿ ಮಸ್ಕಿ ಪಟ್ಟಣದ ಸೋಮನಾಥ ನಗರದಲ್ಲಿ ಗುರುವಾರದಂದು 40 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆಯ ಮುಖ್ಯ ಅಧಿಕಾರಿ ಹನುಮಂತಮ್ಮ ನಾಯಕ್ ಅವರು ಅಭಿನಂದನ್ ಸಂಸ್ಥೆಯು ಲಾಕ್ ಡೌನ್ ನಿಂದಾಗಿ ಕಂಗಾಲಾದ ಕುಟುಂಬಗಳಿಗೆ ನೀಡುತ್ತಿರುವುದು ಶ್ಲಾಘನೆಯ ಕಾರ್ಯವಾಗಿದ್ದು, ಈ ಸಂಸ್ಥೆಯ ಎಲ್ಲಾ ಕಾರ್ಯಗಳಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ, ಎಸ್ ಡಿಎಂ ಸಹಕಾರಿಯ ಪರಮೇಶ್ ಕೊಪ್ಪರದ್, ಕಾಳಪ್ಪ ಪುಟ್ಟಿ, ಶಿಕ್ಷಕರಾದ ಕಳಕಪ್ಪ ಹಾದಿಮನಿ ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಶೃತಿ ಹಂಪರಗುಂದಿ, ರೇಣುಕಾ ಹಂಪರಗುಂದಿ, ಬಸವರಾಜ ಸ್ವಾಮಿ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಮಂಜುನಾಥ ಮಸ್ಕಿ, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಉಪಸ್ಥಿತರಿದ್ದರು.