2:10 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಬದಿಯಡ್ಕ: ಆಟೋರಿಕ್ಷಾ -ಶಾಲಾ ಬಸ್ ಭೀಕರ ಅಪಘಾತ; 5 ಮಂದಿ ಸ್ಥಳದಲ್ಲಿಯೇ ದಾರುಣ ಸಾವು

26/09/2023, 00:46

ಕಾಸರಗೋಡು(reporterkarnataka.com)::ಆಟೋ ರಿಕ್ಷಾ ಹಾಗೂ ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ 5 ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ‌.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ರಿಕ್ಷಾದ ಡ್ರೈವರ್, ಒಬ್ಬ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ ಭಾಗದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕದ ಗುಳಿಗ ಬನದ ಅನತಿ ದೂರದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.
ಮೃತರ ಪರಿಚಯ ಸ್ಥಳದಲ್ಲಿ ಇದ್ದವರಿಗೆ ಮಾಹಿತಿ ಲಭಿಸಿಲ್ಲವಾದ್ದರಿಂದ ಗುರುತು ಪತ್ತೆ ಹಚ್ಚಲು ಗಂಟೆಗಳಷ್ಟು ಕಾಲ ಪರದಾಡಬೇಕಾಯಿತು. ಮೃತದೇಹವನ್ನು‌ ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು