9:21 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬದಿಯಡ್ಕ: ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ

22/07/2023, 15:07

ಕಾಸರಗೋಡು(reporterkarnataka.com): ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತು.
ಕೊಂಕಣಿ ಸಾಹಿತಿ, ಭಾಷಾ ತಜ್ಞೆ ಡಾ. ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್ ಗ್ರಾಮಲೋಕ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಸಭಿಕರಿಗೆ ನೀಡಿದರು. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಡಿ. ಶಂಕರ ಗ್ರಾಮಲೋಕ ಕಾರ್ಯಕ್ರಮಕ್ಕಾಗಿ ಬದಿಯಡ್ಕ ಎಂಬ ಸಣ್ಣ ಗ್ರಾಮವನ್ನು ಆಯ್ಕೆ ಮಾಡಿದಕ್ಕಾಗಿ ಅಕಾಡೆಮಿ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ಯುವ ಸಾಹಿತಿಗಳಾದ ವೆಂಕಟೇಶ್ ನಾಯಕ್, ಶ್ವೇತಾ ಪೈ ಮಂಜೇಶ್ವರ, ರೋಶನ್ ಪೆರಿಯಡ್ಕ ಕವಿತೆಗಳನ್ನು ಓದಿದರೆ ಸ್ಟ್ಯಾನಿ ಬೇಳ ಸಣ್ಣ ಕಥೆಯನ್ನು ಪ್ರಸ್ತುತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು