ಇತ್ತೀಚಿನ ಸುದ್ದಿ
ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಳಿ ಜಿಂಕೆ ಶಿಕಾರಿ: ಬಾಡೂಟಕ್ಕೆ ಸಿದ್ಧತೆ ಮಾಡುತ್ತಿದ್ದ 6 ಮಂದಿ ಬಂಧನ
21/08/2023, 10:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ತಾಲೂಕಿನ ಮೇಲಿನ ಹುಲುವತ್ತಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡುತ್ತಿದ್ದ 6 ಮಂದಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದ ಆರೋಪದ ಮೇಲೆ ಮೊಹಮ್ಮದ್ ಶಕೀಲ್ ಸೇರಿದಂತೆ 6 ಮಂದಿಯನ್ನು ದಸ್ತಗಿರಿ ಮಾಡಲಾಗಿದೆ.
ಮಲೆನಾಡಲ್ಲಿ ವನ್ಯಜೀವಿಗಳಿಗೆ ಆಪತ್ತು ಎದುರಾಗಿದೆ. ಬೃಹತ್ ಗಾತ್ರದ ಜಿಂಕೆ ಬೇಟೆ ಮಾಡಿ ಪಾರ್ಟಿ ಮಾಡುತ್ತಿದ್ದಾಗ ಅಧಿಕಾರಿಗಳ ದಾಳಿ ನಡೆಸಿ ದುಷ್ಕರ್ಮಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಕಳ್ಳ ಬೇಟೆ ಮಾಡಿ ಬಾಡೂಟಕ್ಕೆ ತಯಾರಿ ನಡೆಸುತ್ತಿದ್ದಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೊಡಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾಫಿ ತೋಟಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಜಿಂಕೆ ಶಿಕಾರಿ ಮಾಡಲಾಗಿದೆ. ಶಿಕಾರಿ ಮಾಡಿ ಅಲ್ಲೇ ಬಾಡೂಟಕ್ಕೆ ತಯಾರಿ ಮಾಡಿದ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಾಗಿದೆ. 8 ಕೆಜಿ ಜಿಂಕೆ ಮಾಂಸದ ಜೊತೆಗೆ ನಾಡ ಬಂದೂಕು ವಶ ಪಡಿಸಿಕೊಳ್ಳಲಾಗಿದೆ.
ಪಾರ್ಟಿ ಸ್ಥಳದಲ್ಲಿ ಎನ್.ಜಿ.ಓ ಸದಸ್ಯರಿದ್ದರು ಎನ್ನುವ ಆರೋಪ ಕೇಳಿ ಬಂದಿದೆ.