10:41 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಭದ್ರತಾ ವೈಫಲ್ಯ: ಮದ್ದೂರುನಲ್ಲಿ ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ ಎಟಿಎಂನಿಂದ 20 ಲಕ್ಷ ರೂ. ದೋಚಿ ಪರಾರಿ

13/04/2022, 11:24

ಸಾಂದರ್ಭಿಕ ಚಿತ್ರ
ಮದ್ದೂರು(reporterkarnataka.com): ಮೈಸೂರು- ಬೆಂಗಳೂರು ಹೆದ್ದಾರಿ ಬದಿಯಲ್ಲಿದ್ದ ಎಸ್‌ಬಿಐ ಶಾಖೆಯ ಎಟಿಎಂ ಯಂತ್ರವನ್ನು ದುಷ್ಕರ್ಮಿಗಳು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ 20 ಲಕ್ಷ ರೂ.ಗೂ ಅಧಿಕ ಹಣ ದೋಚಿ ಪರಾರಿಯಾಗಿರುವ ಘಟನೆ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಪಟ್ಟಣದ ಹುಚ್ಚೇಗೌಡ ಬಿಲ್ಡಿಂಗ್‌ನಲ್ಲಿರುವ ಎಸ್‌ಬಿಐ ಶಾಖೆಯ ಎಟಿಎಂ ಯಂತ್ರವನ್ನು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ 20.68 ಲಕ್ಷ ರೂ.ಗಳನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಕೇಂದ್ರದ ಬಳಿ ಭದ್ರತಾ ಸಿಬ್ಬಂದಿಗಳಿಲ್ಲದ್ದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಸೋಮವಾರ ತಡರಾತ್ರಿ ಅಗತ್ಯ ವಸ್ತುಗಳೊಂದಿಗೆ ಆಗಮಿಸಿ ಎಟಿಎಂಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾ ಹಾಗೂ ಯಂತ್ರವನ್ನು ಹಾನಿಗೊಳಿಸಿ ನಂತರ ಗ್ಯಾಸ್ ಕಟ್ಟರ್‌ನಿಂದ ಎಟಿಎಂ ಯಂತ್ರವನ್ನು ಕತ್ತರಿಸಿ ಹಣ ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಎಟಿಎಂ ಸಿಬ್ಬಂದಿ ಕೇಂದ್ರವನ್ನು ಸ್ವಚ್ಛಗೊಳಿಸಲೆಂದು ಮಂಗಳವಾರ ಬೆಳಿಗ್ಗೆ ಆಗಮಿಸಿದ ವೇಳೆ ಕಳವು ಪ್ರಕರಣ ಬೆಳಕಿಗೆ ಬಂದಿದ್ದು ಎಟಿಎಂ ಕೇಂದ್ರ ಉಸ್ತುವಾರಿ ಎಚ್.ಎಲ್. ಮೂರ್ತಿ ನೀಡಿದ ದೂರಿನ ಮೇರೆಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿ ವಾಹಿತಿ ಪಡೆದರು. ಅಲ್ಲದೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೇಣುಗೋಪಾಲ್, ಮಳವಳ್ಳಿ ಡಿವೈಎಸ್‌ಪಿ ಲಕ್ಷ್ಮೀ ನಾರಾಯಣಪ್ರಸಾದ್, ವೃತ್ತ ನಿರೀಕ್ಷಕ ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಕ್ರಮವಹಿಸಿದ್ದಾರೆ.

2021ರ ಮೇ 22ರಂದು ಮದ್ದೂರು ಪಟ್ಟಣದ ಕೊಲ್ಲಿ ವೃತ್ತದ ಬಳಿ ಅಳವಡಿಸಿದ್ದ ಎಸ್‌ಬಿಐ ಶಾಖೆಯ ಎಟಿಎಂ ಕೇಂದ್ರದ ಯಂತ್ರವನ್ನು ಇದೇ ರೀತಿ ಕತ್ತರಿಸಿ ಅಧಿಕ ಪ್ರವಾಣದ ಹಣ ದೋಚಿ ಪರಾರಿಯಾಗಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿರುವುದು ಸ್ಥಳೀಯರ ನಿದ್ದೆಗೆಡಿಸಿದೆ. ತಾಲ್ಲೂಕಿನಾದ್ಯಂತ ಅಕ್ರಮ ಜೂಜು ಅಡ್ಡೆ, ಮದ್ಯ ವಾರಾಟಗಳಿಂದಾಗಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದ್ದು, ಸ್ಥಳೀಯ ಅದರಲ್ಲೂ ಮೈಸೂರು, ಬೆಂಗಳೂರು ಹೆದ್ದಾರಿಯಲ್ಲೇ ಇಂತಹ ಕೃತ್ಯ ನಡೆದಿರುವುದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು