2:36 PM Sunday15 - November 2026
ಬ್ರೇಕಿಂಗ್ ನ್ಯೂಸ್
ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ…

ಇತ್ತೀಚಿನ ಸುದ್ದಿ

ಭದ್ರತಾ ವೈಫಲ್ಯ: ಗೃಹ ಸಚಿವರ ಮನೆಗೆ ಎಬಿವಿಪಿ  ಕಾರ್ಯಕರ್ತರ ಲಗ್ಗೆ; ಪ್ರತಿಭಟನೆ, ಲಾಠಿಚಾರ್ಜ್

30/07/2022, 16:02

ಬೆಂಗಳೂರು(reporterkarnataka.com):  ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಜಯ ಮಹಲ್ ರಸ್ತೆಯಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರವೀಣ್ ಹತ್ಯೆ ಖಂಡಿಸಿ ಈಗಾಗಲೇ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಮತ್ತೊಂದು ಸಂಘಟನೆಯೇ ಸಿಡಿದೆದ್ದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಗೃಹ ಇಲಾಖೆಯನ್ನು ನಿಭಾಯಿಸುವುದರಲ್ಲಿ ಆರಗ ಜ್ಞಾನೇಂದ್ರ ಅವರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವಲ್ಲಿ ವಿಫಲರಾದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇದರ ಜೊತೆಗೆ ಎಸ್‍ಡಿಪಿಐ, ಪಿಎಫ್‍ಐ ನಿಷೇಧಿಸಬೇಕು ಎಂದು ಒತ್ತಾಯಿಸಿದ ಎಬಿವಿಪಿ ಕಾರ್ಯಕರ್ತರು ಅಸಮರ್ಥ ಸಿಎಂ ಬಸವರಾಜ ಬೊಮ್ಮಾಯಿ ಎಂದು ಘೋಷಣೆ ಕೂಗಿದ್ದಾರೆ. ಈ ಪ್ರತಿಭಟನೆ ಅತಿರೇಕಕ್ಕೆ ಹೋಗಿದ್ದು, ಎಬಿವಿಪಿ ಕಾರ್ಯಕರ್ತರು ಗೇಟ್ ಹಾರಿ ಗೃಹ ಸಚಿವರ ನಿವಾಸಕ್ಕೆ ನುಗ್ಗಿದ್ದಾರೆ.

ಈ ವೇಳೆ ಅಲ್ಲಿದ್ದ ಪೊಲೀಸರು ಎಬಿವಿಪಿ ಕಾರ್ಯಕರ್ತರನ್ನು ಬಾಗಿಲ ಬಳಿ ತಡೆದಿದ್ದಾರೆ. ಆದರೆ ಪೊಲೀಸರ ಮಾತಿಗೆ ಜಗ್ಗದ ಎಬಿವಿಪಿ ಕಾರ್ಯಕರರ್ತರು ಮನೆಯೊಳಗೆ ನುಗ್ಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ವಿಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗ ಜಿಲ್ಲೆಯಲ್ಲಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು