5:08 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆ ಸಿದ್ದಾರ್ಥ ಗೆ  ಮದುವೆ ಮನೆಯಲ್ಲಿ ನುಡಿ ನಮನ 

27/01/2022, 09:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರಿಗೆ ಯುವಕನೊಬ್ಬ ತನ್ನ ಮದುವೆಯ ದಿನ ವೇದಿಕೆಯಲ್ಲಿ ನುಡಿನಮನ ಸಲ್ಲಿಸಿದ್ದಾರೆ.


ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊಳೆಕೂಡಿಗೆಯ ಸಂತೋಷ್ ಹಾಗೂ ಬಾಳೆಹೊನ್ನೂರು ಗಡಿಗೇಶ್ವರದ ಪ್ರಮೀತಾ ಅವರ ವಿವಾಹದ ಹಿನ್ನಲೆಯಲ್ಲಿ ಮದುಮಗ ಸಂತೋಷ್ ಅವರ ಮನೆ ಹೊಳೆಕೂಡಿಗೆಯಲ್ಲಿ ಮಂಗಳವಾರ ಮೆಹಂದಿ ಶಾಸ್ತ್ರ ನಡೆದಿದ್ದು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಿದ್ದಾರ್ಥ  ಅವರ ಭಾವಚಿತ್ರವನ್ನು ಇಟ್ಟು ಪುಷ್ಪ ನಮನ ಹಾಗೂ ನುಡಿನಮನ ವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮದುಮಗ ಸಂತೋಷ್, ಬಡ ಕುಟುಂಬದಿಂದ ಬಂದ ನನಗೆ ಸಿದ್ದಾರ್ಥ ಹೆಗ್ಗಡೆ ಅವರು ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಕೊಟ್ಟ ಕಾರಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾದ್ಯವಾಯಿತು ಎಂದರು. 


ಬಿಜೆಪಿ ಮುಖಂಡರಾದ ಸಂಜಯ ಗೌಡ, ಪರೀಕ್ಷಿತ್ ಗೌಡ ಮುಂತಾದವರು ಆಗಮಿಸಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರಕ್ಕೆ ನುಡಿನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು